ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾಮಗಾರಿ ನಿಧಾನಗತಿಗೆ ಇಚ್ಛಾಶಕ್ತಿ ಕೊರತೆ

Parashurama
Updated On : 15 Feb 2013, 11:56 am

ಸಾಗರ: ಹಣ ಇದ್ದರೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಸಾಗರ ಕ್ಷೇತ್ರದಲ್ಲಿ ನಿರೀಕ್ಷಿತ ಕೆಲಸಗಳು ನಡೆಯುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.
ಇಲ್ಲಿನ ಭಾವಸಾರ ಕ್ಷತ್ರಿಯ ಸಮಾಜ ಹಾಗೂ ಶ್ರೀದೇವಿ ತುಳಜಾ ಭವಾನಿ ಗೋಂದಳ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತುಳಜಾ ಭವಾನಿ ಅಮ್ಮನವರ ಸಮುದಾಯ ಭವನ ಕಾಮಗಾರಿಗೆ ಚಾಲನೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದ ನಂತರ ರಾಜ್ಯದೆಲ್ಲೆಡೆ ಅಭಿವೃದ್ಧಿ ಕುಂಠಿತವಾಗಿದೆ ಎಂದು ದೂರಿದರು.
2ಜಿ ಸ್ಪ್ರೆಕ್ಟ್ರಂ ಹಗರಣದಿಂದಾಗಿ ಜಿಲ್ಲೆಗೆ ಎಫ್.ಎಂ. ರೇಡಿಯೂ ಸೌಲಭ್ಯ ದೊರಕುವಲ್ಲಿ ವಿಳಂಬವಾಗಿದೆ ಎಂದ ಅವರು, ಇಲ್ಲಿನ ಸಮುದಾಯ ಭವನಕ್ಕೆ ಸಂಸದರ ನಿಧಿಯಿಂದ 10 ಲಕ್ಷ ನೀಡುವುದಾಗಿ ಘೋಷಿಸಿದರು.
ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್ ಮಾತನಾಡಿದರು. ಗೋಂದಳ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೋಟಿರಾವ್ ಗುಜ್ಜಾರ್ ಅಧ್ಯಕ್ಷತೆ ವಹಿಸಿದ್ದರು. ನಾಗರಾಜ ಲಾಳಂಕೆ, ನಗರಸಭೆ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಬೇಂಗ್ರೆ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement