ಶಿವಮೊಗ್ಗ

ಬೆಂಕಿ ದುರಂತ: ಲಕ್ಷಾಂತರ ನಷ್ಟ

ಶಿವಮೊಗ್ಗ: ಎರಡು ಪ್ರತ್ಯೇಕ ಬೆಂಕಿ ದುರಂತದಲ್ಲಿ ಒಂದು ಜ್ಯೂಸ್ ಅಂಗಡಿ ಹಾಗೂ ಎರಡು ವಾಹನಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರುಪಾಯಿ ನಷ್ಟವಾಗಿದೆ.
ಲಕ್ಕಿನಕೊಪ್ಪ ಸಮೀಪದಲ್ಲಿ ಬೈಕ್ ಹಾಗೂ ಜಲ್ಲಿ ಸಾಗಾಣೆ ಮಾಡುವ ಟಿಪ್ಪರ್ ಲಾರಿಯ ನಡುವೆ ನಡೆದ ಡಿಕ್ಕಿಯಿಂದ ಬೆಂಕಿ ಕಾಣಿಸಿಕೊಂಡು ಬೈಕ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಲಾರಿ ಹಾನಿಗೀಡಾಗಿದೆ.
ಅಪಘಾತ ಸಂದರ್ಭದಲ್ಲಿ ಬೈಕ್‌ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಅಗ್ನಿಶಾಮಕ ದಳವು ಸ್ಥಳಕ್ಕಾಗಮಿಸಿ ಹೆಚ್ಚಿನ ಹಾನಿಯನ್ನು ತಪ್ಪಿಸಿತು. ಅಂದಾಜು 3 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಶಿವಮೊಗ್ಗ ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ಪಂಚವಟಿ ಜ್ಯೂಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಅಂಗಡಿಯಲ್ಲಿದ್ದ ಪೀಠೋಪಕರಣ, ಕ್ಯಾಶ್ ಟೇಬಲ್, ಮೀಟರ್ ಬೋರ್ಡ್ ಸೇರಿ ಮತ್ತಿತರ ವಸ್ತುಗಳಿಗೆ ಹಾನಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರುವ ಶಂಕಿಸಲಾಗಿದೆ. ಘಟನೆಯಲ್ಲಿ ಸುಮಾರು 50 ರಿಂದ 60 ಸಾವಿರ ನಷ್ಟ ಸಂಭವಿಸಿರುವ ಅಂದಾಜು ವ್ಯಕ್ತಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!