ಎಜುಕಿಡ್ಸ್ ಡೇ (ಸುದ್ದಿ ಸಂಕ್ಷೇಪ)
ಶಿವಮೊಗ್ಗ: ಎಜುಕಿಡ್ಸ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಫೆ.16 ರಂದು ನಗರದ ಆಚಾರ್ಯ ತುಳಸಿ ನ್ಯಾಷನಲ್ ಕಾಮರ್ಸ್ ಕಾಲೇಜಿನ ಆವರಣದಲ್ಲಿ ಎಜುಕಿಡ್ಸ್ ಡೇಯನ್ನು ಏರ್ಪಡಿಸಲಾಗಿದೆ. ಮುಖ್ಯ ಅತಿಥಿಯಾಗಿ ಕೃಷಿ ಕಾಲೇಜಿನ ಪ್ರಾಧ್ಯಾಪಕ ಡಾ. ಎಂ. ವಿಘ್ನೇಶ್, ರೋಟರಿ ಸದಸ್ಯ ಎನ್. ಮಂಜುನಾಥ್, ಪಶು ವೈದ್ಯಾಧಿಕಾರಿ ಡಾ. ಮುರುಗೇಶ್, ಸಂಸ್ಥೆಯ ಅಧ್ಯಕ್ಷ ಎಂ. ರಾಮಚಂದ್ರಪ್ಪ ಮತ್ತಿತರರು ಪಾಲ್ಗೊಳ್ಳುವರು ಎಂದು ಸಂಸ್ಥೆ ತಿಳಿಸಿದೆ.
ಉಚಿತ ತರಬೇತಿ
ಶಿವಮೊಗ್ಗ: ಕಲ್ಲಹಳ್ಳಿಯ ಪ್ರಿಯದರ್ಶಿನಿ ಡಿ.ಇಡಿ ಕಾಲೇಜು ಆವರಣದಲ್ಲಿ ಫೆ.16ರಂದು ಬೆಳಿಗ್ಗೆ 10ಗಂಟೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಪ್ರಾಂಶುಪಾಲೆ ಚಂದ್ರಮ್ಮ ನೆರವೇರಿಸುವರು ಎಂದು ಕಾರ್ಯದರ್ಶಿ ರಮೇಶ್ ತಿಳಿಸಿದ್ದಾರೆ.
ಅಪಘಾತ: ಸಾವು
ಸೊರಬ: ಪಟ್ಟಣದ ಶಿವಮೊಗ್ಗ ರಸ್ತೆ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತಾಲೂಕು ಅರಣ್ಯ ಇಲಾಖೆ ನೌಕರರೊಬ್ಬರು ಮೃತಪಟ್ಟಿದ್ದಾರೆ.ಬೈಕ್ ಸ್ಕಿಡ್ ಆಗಿ ಸವಾರ ಬಸವರಾಜ (50) ನೆಲಕ್ಕುರುಳಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ನಿಧನರಾಗಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.