ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ

Lingaraj Badiger
Updated On : 19 Feb 2013, 10:40 am

ಶಿರಾಳಕೊಪ್ಪ: ಹಲವು ಜನಾಂಗದ ಆರಾಧ್ಯದೈವ ಶಿರಾಳಕೊಪ್ಪದ ಮೈಲಾರಲಿಂಗೇಶ್ವರ ದೇವರ ಪ್ರಥಮ ಜಾತ್ರಾಮಹೋತ್ಸವ ಮೂರುದಿನಗಳ ಕಾಲ ಅತ್ಯಂತ ವಿಜ್ರಂಭಣೆಯಿಂದ ನಡೆಯಿತು.
ಪಟ್ಟಣದ ಸೊರಬ ರಸ್ತೆಯಲ್ಲಿರುವ ಮೈಲಾರಲಿಂಗೇಶ್ವರ ದೇವರ ದೇವಸ್ಥಾನ ಕಳೆದ ವರ್ಷ ನೂತನವಾಗಿ ನಿರ್ಮಿಸಲಾಗಿತ್ತು. ನಿರಂತರ ಕಾರ್ಯಕ್ರಮಗಳನ್ನು ನಡೆಸುತ್ತಾ ಎಲ್ಲರ ಮೆಚ್ಚಿಗೆ ಪಡೆದಿದ್ದ ಮೈಲಾರ ಲಿಂಗೇಶ್ವರನಿಗೆ ನಡೆದ ಪ್ರಥಮ ವರ್ಷದ ಜಾತ್ರಾ ಮಹೋತ್ಸವ ವಿವದ ಕಾರ್ಯಕ್ರಮ ಹಾಗು ಸಾರ್ವಜನಿಕ ಅನ್ನಸಂತರ್ಪಣೆಯೊಂದಿಗೆ ಕೊನೆಗೊಂಡಿದೆ.
ಜಾತ್ರಾಯ ಕೊನೆದಿನದಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೈಲಾರ ಲಿಂಗೇಶ್ವರ ದೇವರ ರಾಜಬೀದಿ ಉತ್ಸವ ನಡೆಯಿತು.ಕಾರ್ಯಕ್ರಮದಲ್ಲಿ ಗೋರಪ್ಪನವರು ತಮ್ಮ ದೇವರಿಗೆ ಜಯಕಾರ ಹಾಕುತ್ತಾ ಮೆರವಣಿಗೆಯಲ್ಲಿ ಸಾಗಿದರು.
ಕಾರ್ಯಕ್ರಮ ನಿಮಿತ್ತ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆದವು.ಹಾಗೆಯೇ ದೇವರಿಗೆ ವಿಶೇಷ ಅಲಂಕಾರ ಪೂಜಾಕಾರ್ಯಕ್ರಮಗಳು ನಡೆದವು ಭಕ್ತರು ಸ್ವಾಮಿಯ ದರ್ಶನ ಪಡೆದು ಜಾತ್ರಾ ಕಾರ್ಯಕ್ರಮಕ್ಕೆ ಸಹಕರಿಸಿದರು.ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಭಾಗವಹಿಸಿದ್ದರು.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement