ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

175 ಕ್ಷೇತ್ರಗಳಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಕಣಕ್ಕೆ

Lingaraj Badiger
Updated On : 20 Feb 2013, 11:16 am

ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜಿಲ್ಲೆಯ 175 ಕ್ಷೇತ್ರಗಳಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ವೆಂಕಟೇಶ್‌ಗೌಡ ತಿಳಿಸಿದರು.
ಅಭ್ಯರ್ಥಿಗಳ ಪಟ್ಟಿ: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸ್ಥಳೀಯ ಚುನಾವಣೆಗಳ ಉಸ್ತುವಾರಿಯನ್ನು ಪಕ್ಷ ತಮಗೆ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ ಹಾಗೂ ಪಪಂಗಳಿಗೆ ಪ್ರವಾಸ ಮಾಡಿ ಅರ್ಹ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಳಿಸಲಾಗುವುದು. ನಂತರ ರಾಜ್ಯ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅನುಮೋದನೆ ಪಡೆದು 23ರಂದು ಅಂತಿಮ ಪಟ್ಟಿ ಸಿದ್ದಗೊಳಿಸಲಾಗುವುದು ಎಂದರು.
ಪರಿವರ್ತನಾ ಕಾರ್ಯ: ಮುಂದಿನ ವಿಧಾನಸಭೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಡಿಪಾಯವಿದ್ದಂತೆ. ಆದ್ದರಿಂದ ವಾರ್ಡ್, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸಲಾಗುವುದು. ಪಕ್ಷದ ಸಂಸ್ಥಾಪಕ ಶ್ರೀರಾಮುಲು ಅವರ ರಾಜ್ಯ ಪ್ರವಾಸದಿಂದ ಸಾರ್ವಜನಿಕರ ಮನಪರಿರ್ತನಾ ಕಾರ್ಯ ಯಶಸ್ವಿಯಾಗಿದ್ದು, ಮತ ಪರಿವರ್ತನಾ ಕಾರ್ಯ ಮಾಡಬೇಕಿದೆ ಎಂದ ಅವರು, ತೀರ್ಥಹಳ್ಳಿಯ ಜಿಪಂ ಮಾಜಿ ಸದಸ್ಯ ಅಶೋಕಮೂರ್ತಿ, ಶಿಕಾರಿಪುರದ ಜಿಪಂ ಮಾಜಿ ಅಧ್ಯಕ್ಷ ಫಕೀರಪ್ಪ ಬಿಎಸ್‌ಆರ್ ಸೇರಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement