ಬೆಂಕಿ ಅನಾಹುತಗಳ ಬಗ್ಗೆ ಎಚ್ಚರ ವಹಿಸಿ
ಜೋಗ್ಫಾಲ್ಸ್: ಬೆಂಕಿಯಿಂದಾಗುವ ಅವಘಡಗಳಿಗೆ ಸಂಬಂಧಿಸಿ ಮುನ್ನೆಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಅಪಾಯವನ್ನು ತಪ್ಪಿಸಲು ಸಾಧ್ಯ ಎಂದು ಶಿವಮೊಗ್ಗ ವಲಯದ ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿ ಕೆ. ಶಿವಕುಮಾರ್ ತಿಳಿಸಿದರು.
ಮಹಾಗಣಪತಿ ಸಮುದಾಯ ಭವನದಲ್ಲಿ ಶಿವಮೊಗ್ಗ ಅಗ್ನಿ ಶಾಮಕ ಠಾಣೆಯ ಸಹಯೋಗದೊಂದಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಆಶ್ರಯದಲ್ಲಿ ನಡೆದ ಅಗ್ನಿ ಅವಘಡಗಳಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅವರು ಮಾಹಿತಿ ನೀಡಿದರು.
ಮಾಹಿತಿ ಕಾರ್ಯಕ್ರಮದಲ್ಲಿ ನಿಗಮದ ಮುಖ್ಯ ಅಭಿಯಂತರ ಜಿ.ಹನುಮಂತಪ್ಪ, ನಿಗಮದ ಸುರಕ್ಷತಾಧಿಕಾರಿ ಎಂ. ಹೇಮಂತರಾಜು, ಎಸ್.ಕೆ. ಶಿವರಾಮ್ ಸೇರಿದಂತೆ ಮತ್ತಿತರರು ಇದ್ದರು. ಈ ಸಂದರ್ಭದಲ್ಲಿ ಬೆಂಕಿ ನಂದಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.