ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Mainashree
Updated On : 24 Feb 2013, 12:25 pm

ಶಿವಮೊಗ್ಗ: ರಾಜ್ಯ ವಿಜ್ಞಾನ ಪರಿಷತ್ತು ವೈಜ್ಞಾನಿಕ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಲು ಉದ್ದೇಶಿಸಿದೆ.
    ಅಲ್ಲದೇ ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ವಿಶೇಷ ಪ್ರತಿಭೆ ತೋರಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಸಕ್ತ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
 ಅರ್ಜಿ ನಮೂನೆಗಳನ್ನು, ನಾಮನಿರ್ದೇಶನಗಳನ್ನು ಮೊದಲು ಜಿಲ್ಲಾ ಹಂತದಲ್ಲಿ ನಂತರ ರಾಜ್ಯ ಮಟ್ಟದಲ್ಲಿ ಪರಿಶೀಲಿಸಿ ಅತ್ಯುತ್ತಮವೆಂದು ಪರಿಗಣಿಸಲ್ಪಟ್ಟ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಯುವ ವಿಜ್ಞಾನಿಗಳಾಗಿ ಆಯ್ಕೆ ಮಾಡಲಾಗುವುದು.
     ವಿದ್ಯಾರ್ಥಿ ಕಳೆದ ಮೂರು ಶೈಕ್ಷಣಿಕ ವರ್ಷಗಳಲ್ಲಿ ಡಿಎಸ್‌ಇಆರ್‌ಟಿ, ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು ಮತ್ತಿತರ ಸಂಸ್ಥೆಗಳಿಂದ ಆಯೋಜನೆಗೊಂಡ ಮಕ್ಕಳ ವಿಜ್ಞಾನ ಗೋಷ್ಠಿ, ಪ್ರತಿಭಾಕಾರಂಜಿ, ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪಡೆದುಕೊಂಡ ಬಹುಮಾನ, ಪ್ರಶಸ್ತಿ ಮತ್ತು ಎನ್‌ಟಿಎಸ್‌ಸಿ ಪರೀಕ್ಷಾ ಫಲಿತಾಂಶಗಳನ್ನು ಆದರಿಸಿ, ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.
   ಪ್ರಶಸ್ತಿ ಪಡೆಯಲಿಚ್ಚಿಸುವ ಅಭ್ಯರ್ಥಿ ಪ್ರೌಢಶಾಲೆ ಅಥವಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಯಾಗಿದ್ದು, 18ವರ್ಷ ವಯೋವುತಿಯೊಳಗಿನವರಾಗಿರಬೇಕು.
  ಆಸಕ್ತರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತಮ್ಮ ಶಾಲೆಯ ಮುಖ್ಯೋಪಾಧ್ಯಾಯರ ಅಥವಾ ಪ್ರಾಂಶುಪಾಲರ ಮೂಲಕ ಮಾರ್ಚ್ 10ರೊಳಗಾಗಿ ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ವಿವರಗಳಿಗಾಗಿ ರಾಜ್ಯ ವಿಜ್ಞಾನ ಪರಿಷತ್ತನ್ನು ಸಂಪರ್ಕಿಸಬಹುದು. ದೂ-080 26718939 ಎಂದು ರಾಜ್ಯ ವಿಜ್ಞಾನ ಪರಿಷತ್ತು  ಪ್ರಕಟಣೆಯಲ್ಲಿ ತಿಳಿಸಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement