ವಿಶೇಷ ಮಕ್ಕಳಿಗೆ ವಿಶೇಷ ಆದ್ಯತೆ ಅಗತ್ಯ
ಶಿವಮೊಗ್ಗ: ವಿಶೇಷ ಮಕ್ಕಳಿಗೆ ವಿಶೇಷ ಆದ್ಯತೆ ನೀಡುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಾಲ್ ಹೇಳಿದರು. ನೆಹರೂ ಕ್ರೀಡಾಂಗಣದಲ್ಲಿ ಆರಂಭವಾದ ವಿಕಲ ಚೇತನರಿಗಾಗಿ ಜಿಲ್ಲಾ ಮಟ್ಟದ ಸ್ಪೆಷಲ್ ಒಲಂಪಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಮಕ್ಕಳನ್ನು ಆದ್ಯತೆ ಮೇರೆಗೆ ಪ್ರೋತ್ಸಾಹಿಸಬೇಕು ಎಂದರು. ಎರಡು ದಿನಗಳು ನಡೆಯುವ ಈ ಕ್ರೀಡಾಕೂಟದಲ್ಲಿ ವಿಶೇಷ ಮಕ್ಕಳು ಕನಿಷ್ಠ ಐದು ದಾಖಲೆಗಳನ್ನು ಮುರಿಯಬೇಕು ಎಂದು ಹುರಿದುಂಬಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್, ವಿಶೇಷ ಮಕ್ಕಳು ಜಿಲ್ಲಾ ಮಟ್ಟದ ಒಲಂಪಿಕ್ಸ್‌ನಲ್ಲಿ ಕ್ರೀಡಾಸ್ಫೂರ್ತಿ ಮೆರೆಯಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕುಮಾರ್, ಆಹಾರ ಇಲಾಖೆ ಉಪನಿರ್ದೇಶಕ ವಿಶ್ವನಾಥ್ ಇತರರಿದ್ದರು