ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸರ್ಕಾರಿ ಆಸ್ಪತ್ರೆಯಲ್ಲಿ ಪೋಲಿಯೋ

Lingaraj Badiger
Updated On : 25 Feb 2013, 11:41 am

ಭದ್ರಾವತಿ: ಪೋಲಿಯೋ ಪಿಡುಗನ್ನು ಸಂಪೂರ್ಣವಾಗಿ ನಿವಾರಿಸಿದ್ದರೂ ಅದರ ವಿರುದ್ಧ ನಾವು ಶೇಕಡ ನೂರರಷ್ಟು ಫಲಿತಾಂಶವನ್ನು ಸಾಧಿಸಿದ್ದೇವೆಂದು ಹೇಳಲಾಗುವುದಿಲ್ಲವೆಂದು ತಹಸೀಲ್ದಾರ್ ಸಿದ್ದಮಲ್ಲಪ್ಪ ನುಡಿದರು.
ರೋಟರಿ ಕ್ಲಬ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಏರ್ಪಡಿಸಿದ್ದ ಪೋಲಿಯೋ ಹನಿ ನೀಡಿಕೆ ಕಾರ್ಯಕ್ರಮವನ್ನು ಔಪಚಾರಿಕವಾಗಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕಿಸುವತ್ತ ತಪ್ಪದೇ ಗಮನವೀಯಬೇಕೆಂದು ಕರೆ ನೀಡಿದರು. ಸಮಾಜವನ್ನು ಪೋಲಿಯೋ ಮುಕ್ತ ಸಮಾಜವನ್ನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಹೆಗಲಮೇಲಿದೆ ಎಂದು ತಿಳಿಸಿದರು.
ತಾಲೂಕು ಆರೋಗ್ಯಾಧಿಕಾರಿ ಗುಡ್ಡದಪ್ಪ, ರೋಟರಿ ಕ್ಲಬ್ ಅಧ್ಯಕ್ಷ ಕೆ.ಎಸ್. ವಾದಿರಾಜ ಅಡಿಗ, ಟಿ.ಎಸ್. ದುಶ್ಯಂತರಾಜ್, ಶ್ರೀನಿವಾಸ್, ಮಲ್ಲಿಕಾರ್ಜುನ್, ಕೆ. ಸುಧಾಕರಶೆಟ್ಟಿ, ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಮತಿ ಮೊದಲಾದವರು ಉಪಸ್ಥಿತರಿದ್ದರು.
ತೀರ್ಥಹಳ್ಳಿಯಲ್ಲಿ ಲಸಿಕೆ
ತೀರ್ಥಹಳ್ಳಿ: ಜನಜಾಗೃತಿಯಿಂದ ಅನೇಕ ರೋಗಗಳನ್ನು ತಡೆಗಟ್ಟುವುದು ಮಾತ್ರವಲ್ಲದೆ ಬುಡ ಸಹಿತ ನಿರ್ಮೂಲನೆಯನ್ನೂ ಮಾಡಬಹುದೆನ್ನುವುದಕ್ಕೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಒಳ್ಳೆಯ ಉದಾಹರಣೆಯಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಪಲ್ಸ್ ಪೋಲಿಯೋ ಚಾಲನಾ ಸಮಿತಿ ಅಧ್ಯಕ್ಷ ಆದ ಪುಟ್ಟಸ್ವಾಮಿ ತಿಳಿಸಿದರು.
ದ್ವಿತೀಯ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಇಲ್ಲಿನ ಜೆ.ಸಿ. ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಗುವಿಗೆ ಪೋಲಿಯೋ ಹನಿಗಳನ್ನು ಹಾಕುವುದರ ಮೂಲಕ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಕೆ.ಎಸ್. ಈ ಬಾರಿಯ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗಾಗಿ ನಡೆಸಿರುವ ಪೂರ್ವಸಿದ್ಧತೆಗಳ ಬಗ್ಗೆ ತಿಳಿಸಿ, ತಾಲೂಕಿನ ಎಲ್ಲಾ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು, ವಿವಿಧ ಸ್ವಯಂಸೇವಾ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಾ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಜೆಸಿ ಆಸ್ಪತ್ರೆಯ ತಜ್ಞ ವೈದ್ಯ ಪ್ರಭಾಕರ, ಹಿರಿಯ ಆರೋಗ್ಯ ಸಹಾಯಕ ಜಗದೀಶ, ಆರೋಗ್ಯ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement