ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಗಣರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ

Lingaraj Badiger
Updated On : 22 Jan 2013, 1:48 am

ಶಿವಮೊಗ್ಗ: ಜನವರಿ 26ರಂದು ಗಣರಾಜ್ಯೋತ್ಸವವನ್ನು ಜಿಲ್ಲಾ ಕೇಂದ್ರದಲ್ಲಿ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಈ ಸಂಬಂಧ ಸೋಮವಾರ ಹಿರಿಯ ಉಪ ವಿಭಾಗಾಧಿಕಾರಿ ಎಂ.ಎಲ್. ವೈಶಾಲಿ ಅವರ ಅಧ್ಯಕ್ಷೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಪ್ರತಿವರ್ಷದಂತೆ ನಗರದ ನೆಹರು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಅಂದು ನಗರದಾದ್ಯಂತ ಸ್ವಚ್ಛತೆ, ದೀಪಾಲಂಕಾರ, ತಳಿರು ತೋರಣಗಳಿಂದ ವಿವಿಧ ರಸ್ತೆ ಹಾಗೂ ವೃತ್ತಗಳಲ್ಲಿ ಅಲಂಕಾರ ಮಾಡಲು ಚರ್ಚಿಸಲಾಯಿತು.
ಅಲ್ಲದೆ, ಗಣ್ಯ ವ್ಯಕ್ತಿಗಳ ಆಹ್ವಾನ, ನೆಹರು ಕ್ರೀಡಾಂಗಣದಲ್ಲಿ ಗಣ್ಯರಿಂದ ಗಣರಾಜ್ಯೋತ್ಸವ ಸಂದೇಶ ಹಾಗೂ ಮಕ್ಕಳಿಂದ ದೇಶ ಭಕ್ತಿ ಗೀತೆಗಳಿಗೆ ನೃತ್ಯ ರೂಪಕ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಮರ್ಪಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅಂದು ಸಂಜೆ 4.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಪೊಲೀಸ್ ಬ್ಯಾಂಡ್‌ನೊಂದಿಗೆ ಆರಂಭವಾಗಲಿದ್ದು ಶಾಲಾ ಮಕ್ಕಳಿಂದ ಕಾರ್ಯಕ್ರಮಗಳು ನಡೆಯಲಿವೆ.
ಅಲ್ಮೇರಾ ಒಡೆದು ಕಳ್ಳತನ
ಸೊರಬ: ಪಟ್ಟಣದಲ್ಲಿ ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದು, ಈಚೆಗೆ 7 ಮನೆಗಳ ಕಳ್ಳತನಗಳ ಬಳಿಕ ಇದೀಗ ಸೊಪ್ಪಿನ ಕೇರಿ ಎನ್. ಕುಮಾರ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿನ ಮೂರು ಅಲ್ಮೇರಾಗಳನ್ನು ಒಡೆದು ಅದರಲ್ಲಿದ್ದ ನಗ,ನಾಣ್ಯ, ಚಿನ್ನಾಭರಣಗಳನ್ನು ದೋಚಲಾಗಿದೆ. ಕುಟುಂಬದವರು ಮನೆಯಲ್ಲಿಲ್ಲದಾಗ ಕಳ್ಳತನ ನಡೆದಿದ್ದು, ಸೋಮವಾರ ವಾಪಸ್ಸಾದಾಗ ಕಳ್ಳತನ ನಡೆದಿದ್ದು ಗೊತ್ತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement