ಶಿವಮೊಗ್ಗ

ಮದ್ಯವರ್ಜನ ಶಿಬಿರ ಹೆಮ್ಮೆಯ ಸಂಗತಿ

ಶಿರಾಳಕೊಪ್ಪ: ವಿದ್ಯಾಸಂಸ್ಥೆಗಳ ನಿರ್ಮಾಣ ಮಾಡುವ ಮೂಲಕ ವಿದ್ಯಾದಾನ, ಸಾಮೂಹಿಕ ಮದುವೆ, ಮದ್ಯವರ್ಜನ ಶಿಬಿರದಂತಹ ಕಾರ್ಯಕ್ರಮಗಳನ್ನು ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಮುಖಾಂತರ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಧರ್ಮಸ್ಥಳ ಗ್ರಾ.ಯೋ.ನಾಗೇಶ್ ತಿಳಿಸಿದರು.
ಸಮೀಪದ ನೇರಲಗಿ ವೀರಭದ್ರ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶಿಕಾರಿಪುರ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ಭಾಗವಹಿಸಿದ ಮದ್ಯವ್ಯಸನಿಗಳಿಗೆ  ಶುಭಹಾರೈಸಿ ಕಾರ್ಯಕ್ರಮ ಪ್ರಾರಂಭಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಶೇಖರಗೌಡ, ಮದ್ಯವ್ಯಸನಿಗಳ ಮನಪರಿವರ್ತಿಸುವ ಕಾರ್ಯಕ್ರಮದಿಂದ ಹಿಂದೆ ಹಲವಾರು ಮದ್ಯವ್ಯಸನಿಗಳು ಕುಡಿತ ಬಿಟ್ಟಿದ್ದಾರೆ ಎಂದರು. ಮಹೇಂದ್ರ ಮಾತನಾಡಿದರು.
ಶಿಬಿರದಲ್ಲಿ ಕೆಲ ಮದ್ಯವ್ಯಸನಿಗಳು ಬಾಗಿಲು ಮುರಿದು ಪರಾರಿಯಾಗಲು ಪ್ರಯತ್ನಿಸಿ, ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ವಿಫಲರಾಗಿದ್ದಾರೆ. ಮಂಗಳವಾರದಿಂದ ನಿಯಮಿತವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್