ಯುವ ಕಾಂಗ್ರೆಸ್ ಸಂಭ್ರಮಾಚರಣೆ
ಶಿವಮೊಗ್ಗ: ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ಕ್ರಮವನ್ನು ಸ್ವಾಗತಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಶಿವಮೊಗ್ಗ ವಿಧಾನ ಸಭೆ ಯುವ ಕಾಂಗ್ರೆಸ್ನಿಂದ ನಗರದ ಗೋಪಿ ವೃತ್ತದಲ್ಲಿ 19ರಂದು ರಾತ್ರಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ರಾಹುಲ್ ಗಾಂಧಿಯವರಿಗೆ ಈ ಜವಾಬ್ದಾರಿ ಕೊಡುವ ಮೂಲಕ ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆಗೆ ಅನುಮೋದನೆ ನೀಡಿದ ರಾಷ್ಟ್ರೀಯ ಕಾರ್ಯಕಾರಿಣಿಗೆ ಅಭಿನಂದನೆ ಸಲ್ಲಿಸುವುದಾಗಿ ಯುವ ಕಾಂಗ್ರೆಸ್ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ರಂಜಿತ್ ತಿಳಿಸಿದ್ದಾರೆ.
ಶಿವಮೊಗ್ಗ ಲೋಕ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ ಯೋಗೀಶ್, ಶಿವಮೊಗ್ಗ ವಿಧಾನ ಸಭೆ ಯುವ ಕಾಂಗ್ರೆಸ್ ಅಧ್ಯಕ್ಷ ಕೆ. ರಂಗನಾಥ, ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್, ಆರ್. ಕಿರಣ್, ಎಮ್. ಧರ್ಮ, ಫೈರೋಜ್, ಮುರುಳಿ, ವಸಂತ, ದಿಲೀಪ, ಮುನಾವರ್, ಸುನೀಲ್, ಹರೀಶ್ ಈ ಸಂದರ್ಭದಲ್ಲಿ ಇದ್ದರು.