ಶಿವಮೊಗ್ಗ: ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಂಯುಕ್ತಾಶ್ರಯದಲ್ಲಿ ಜ.30 ಹಾಗೂ 31ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ರಾಜ್ಯ ಮಟ್ಟದ ವಿಶೇಷ ಸಹಕಾರ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಜ.30ರಂದು ಬೆಳಿಗ್ಗೆ 10.30ಕ್ಕೆ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಉದ್ಘಾಟಿಸುವರು. ಬಿ.ಡಿ. ಭೂಕಾಂತ್ ಅಧ್ಯಕ್ಷತೆ ವಹಿಸುವರು.