ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯ: ಮೇಘರಾಜ್

Lingaraj Badiger
Updated On : 28 Jan 2013, 11:14 am

ಸಾಗರ: ಆರೋಗ್ಯಕರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಸರ್ಕಾರದೊಂದಿಗೆ ಸ್ಥಳೀಯ ಸಂಘ ಸಂಸ್ಥೆಗಳು ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮ ಆಯೋಜಿಸುವ ಮೂಲಕ ಸದೃಢ ಸಮಾಜಕ್ಕೆ ಮುಂದಾಗಬೇಕು ಎಂದು ನಗರಸಭೆ ಸದಸ್ಯ ಹಾಗೂ ಜನನಿ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದರು.
 ಹೆಲ್ಪಿಂಗ್ ಹ್ಯಾಂಡ್ ಸೇವಾ ಟ್ರಸ್ಟ್ ಹಮ್ಮಿಕೊಂಡಿದ್ದ ಹೊಲಿಗೆರಹಿತ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ, ಯುವಜನರು ಕೇವಲ ರಾಜಕೀಯ ಕ್ಷೇತ್ರದತ್ತ ಆಕರ್ಷಿತರಾಗದೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದರು.
 ಅಧ್ಯಕ್ಷತೆ ವಹಿಸಿದ್ದ ಟ್ರಸ್ಟಿನ ಅಧ್ಯಕ್ಷ ರವಿ ವಿ. ನಾಯಕ್, ದೃಷ್ಟಿ ನೀಡುವುದು ಪುಣ್ಯದ ಕೆಲಸ. ಆರ್ಥಿಕವಾಗಿ ಸಂಕಷ್ಟದಲ್ಲಿರುವವರು ನಗರಗಳಿಗೆ ತೆರಳಿ, ದುಬಾರಿ ವೆಚ್ಚದ ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣಕ್ಕೆ ಟ್ರಸ್ಟ್ ಇಂತಹ ಶಿಬಿರ ಆಯೋಜಿಸುತ್ತಿದೆ. ಹಿಂದಿನ ವರ್ಷ ನೇತ್ರ ಚಿಕಿತ್ಸಾ ಶಿಬಿರ ಮಾಡಿದಾಗ ಸುಮಾರು 150 ಜನರು ಇದರ ಪ್ರಯೋಜನ ಪಡೆದಿದ್ದರು. ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
 ನಗರಸಭೆ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಬೇಂಗ್ರೆ, ಸದಸ್ಯ ಎಸ್.ಎಲ್. ಮಂಜುನಾಥ್, ವಿ.ಕೆ. ವಿಜಯಕುಮಾರ್, ಸಿವಿಲ್ ಸರ್ಜನ್ ಡಾ.ಬಿ.ಜಿ. ಸಂಗಂ, ಡಾ.ಕೆ.ಪಿ. ಅಚ್ಚುತ್, ಬಿ.ಎಸ್. ಪ್ರಭಾಕರ್, ಡಾ. ಪ್ರಮೋದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement