ಅಲ್ಪಸಂಖ್ಯಾತ ಮಹಿಳೆಯರಿಗೆ ನಾಯಕತ್ವ ತರಬೇತಿ
ಶಿರಾಳಕೊಪ್ಪ: ಅಲ್ಪಸಂಖ್ಯಾತ ಮಹಿಳೆಯರು ಇಂದಿನ ನಾಗರಿಕ ಸಮಾಜಗಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದೇಶದ ಪ್ರಗತಿಗೆ ಸಹಕಾರ ಕೊಡುವುದರೊಂದಿಗೆ ಬೆಳೆಯಬೇಕು ಎಂದು ಮಣಿಪಾಲ ಸಿಂಡಿಕೇಟ್ ಬ್ಯಾಂಕ್ ವ್ಯವಸ್ಥಾಪಕ ನಾಗರಾಜ್ ಕರೆ ನೀಡಿದರು.
ಅಲ್ಪಸಂಖ್ಯಾತ ಸಚಿವಾಲಯ ನವದೆಹಲಿ, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿವಮೊಗ್ಗ, ಜಿಲ್ಲಾ ಅಡಳಿತ ಹಾಗೂ ಪರಿವರ್ತನ ಗ್ರಾಮಾಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿಯ ಶಕ್ತಿಕೇಂದ್ರದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸೋಮಾಚಾರಿ, ಬುಲ್ಲಾ ಖಾನ್ ನೆಹರು ಯುವಕೇಂದ್ರದ ಸಮನ್ವಯಾಧಿಕಾರಿ ಎ.ಎ. ಡೋನಿ, ಪರಿವರ್ತನಾ ಕೇಂದ್ರ ಯೋಜನಾ ನಿರ್ದೇಶಕ ಶಂಕರಪ್ಪ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿವರ್ತನ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್. ರಾಜಪ್ಪ ವಹಿಸಿ ಮಾತನಾಡಿದರು.