ಕೊಡಚಾದ್ರಿ ವ್ಯವಸ್ಥಾಪನ ಸಮಿತಿಗೆ ಆಯ್ಕೆ
ಹೊಸನಗರ: ಪ್ರಾಕೃತಿಕ, ಧಾರ್ಮಿಕ ಶ್ರದ್ಧಾಕೇಂದ್ರ ಕೊಡಚಾದ್ರಿ ಶ್ರೀ ಪರ್ವತೇಶ್ವರ ಹುಲಿರಾಯ ಸಿದ್ಧೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚಿಸಲಾಗಿದ್ದು, ಗ್ರಾಪಂ ಮಾಜಿ ಅಧ್ಯಕ್ಷ ಶಿವರಾಮಶೆಟ್ಟಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾಧಿಕಾರಿ ಅಧಿಕೃತ ಆದೇಶದ ಮೇರೆಗೆ 3 ವರ್ಷ ಸಮಿತಿ ಕಾರ್ಯನಿರ್ವಹಿಸಲಿದೆ. ಬಿ.ಎಸ್. ಮಹಾಬಲೇಶ್ವರ, ರಾಜೇಂದ್ರಶೆಟ್ಟಿ, ಉದಯ ಪೂಜಾರಿ, ಕೆ.ಎಲ್. ಅರುಣ್, ವಿವೇಕ ಕಾಮತ್, ಲಕ್ಷ್ಮಿ, ತ್ರಿವೇಣಿ, ಕೆ.ಎಸ್. ನಾಗೇಶ್ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ವಿಕಲ ಚೇತನ ಶಾಲಾ ಮಕ್ಕಳ ಕ್ರೀಡಾಕೂಟ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ಫೆ.2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಎಚ್. ರಸ್ತೆಯಲ್ಲಿರುವ ಸರ್ಕಾರಿ ಪದ ವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ವಿಕಲ ಚೇತನ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಏರ್ಪಡಿಸಿದೆ.
ಈ ಪಂದ್ಯಾವಳಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 300ಕ್ಕೂ ಹೆಚ್ಚಿನ ಕ್ರೀಡಾಪಟುಗಳು ಹಾಗು ಅವರ ಸಹಾಯಕರು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮದ ಮೇಲ್ವಿಚಾರಣೆಗೆ 40 ದೈಹಿಕ ಶಿಕ್ಷಣ ಶಿಕ್ಷಕರು, ಕ್ರೀಡಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.