ಪರೀಕ್ಷಾ ಒತ್ತಡ ನಿವಾರಣೆ ಕುರಿತು ಕಾರ್ಯಾಗಾರ
ಭದ್ರಾವತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಹಾಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನ್ಯೂಟೌನ್ ಸೈಂಟ್ ಚಾರ್ಲ್ಸ್ ಶಾಲೆ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸುವುದು ಹೇಗೆ ಹಾಗೂ ಪರೀಕ್ಷಾ ಒತ್ತಡ ನಿವಾರಣೆ ಎಂಬ ಎರಡು ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕಿ ್ತಗಳಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಾಗಾರಕ್ಕೆ 6 ವಿದ್ಯಾರ್ಥಿಗಳನ್ನು ಒಬ್ಬ ಮಾರ್ಗದರ್ಶಿ ಶಿಕ್ಷಕರೊಂದಿಗೆ ಕಾರ್ಯಾಗಾರ ನಡೆಯಲಿರುವ ಶಾಲೆಯಲ್ಲಿ ಹಾಜರಿರಬೇಕೆಂದು ಸಹ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ.