ಬಾಲಕ ನಾಪತ್ತೆ
ಶಿವಮೊಗ್ಗ: ರಾಗಿಗುಡ್ಡ- ಶಾಂತಿನಗರದ ಅಬ್ದುಲ್ ಮಜೀದ್ ಅವರ ಮಗ ಮಹಮದ್ ಫಜಲ್ (12ವರ್ಷ) ನಗರದ ಆರ್.ಸಿ. ಚರ್ಚ್ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದು, ಜೂ.25ರಂದು ಕಾಣೆಯಾಗಿದ್ದಾನೆ. ಸುಮಾರು 4 ಅಡಿ ಎತ್ತರ, ಕೆಂಪು ಬಣ್ಣ ಹೊಂದಿರುವ ಈತ ಕನ್ನಡ ಮತ್ತು ಉರ್ದು ಮಾತನಾಡುತ್ತಾನೆ. ನೀಲಿ ಬಣ್ಣದ ಟೀ ಷರ್ಟ್ ಮತ್ತು ಪ್ಯಾಂಟ್ ಧರಿಸಿದ್ದಾನೆ. ಈತನ ಸುಳಿವು ದೊರೆತಲ್ಲಿ ಜಿಲ್ಲಾ ಪೊಲೀಸ್ವ್ರಿಷ್ಠಾಧಿಕಾರಿ ಅಥವಾ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸರಣಿ ಕಾರ್ಯಕ್ರಮ
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಕುರಿತು ಜುಲೈ 8ರಿಂದ ಪ್ರತಿ ಸೋಮವಾರ ಬೆಳಿಗ್ಗೆ 8.35ಕ್ಕೆ ಸರಣಿ ಬಾನುಲಿ ಕಾರ್ಯಕ್ರಮ ಪ್ರಸಾರ ಮಾಡಲಿದೆ. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಆಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.