ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2013-14ನೇ ಸಾಲಿನಲ್ಲಿ ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಐಎಎಸ್, ಐಪಿಎಸ್ ಮತ್ತು ಇತರೆ ಅಖಿಲ ಭಾರತ ನಾಗರಿಕ ಸೇವಾ ಸ್ಪರ್ಧಾತ್ಮಕ, ಪರೀಕ್ಷೆಗಳಿಗೆ ರಾಷ್ಟ್ರದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳ ಮೂಲಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಉದ್ದೇಶಿಸಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗುಂಪುಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಜು.20ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗಾಗಿ ಇಲಾಖೆಯ ಅಂತರ್ಜಾಲ ತಾಣ ಅಥವಾ ಮೊ- 8123248707ನ್ನು ಸಂಪರ್ಕಿಸಬಹುದು.