ಅನ್ನಭಾಗ್ಯ ಯೋಜನೆ ಉದ್ಘಾಟನೆ 10ಕ್ಕೆ
ಶಿವಮೊಗ್ಗ: ಜಿಲ್ಲಾಡಳಿತ, ಜಿಪಂ, ಆಹಾರ- ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಂಯುಕ್ತಾಅಸರಯದಲ್ಲಿ ಜು. 10ರಂದು ಬೆಳಗ್ಗೆ 11ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ರು. 1 ದರದಲ್ಲಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹಾಗೂ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿಯವರ ಉಪಸ್ಥಿತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಉದ್ಘಾಟಿಸುವರು. ಸಚಿವ ದಿನೇಶ್ ಗುಂಡೂರಾವ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಸಂಸದ ಬಿ.ವೈ. ರಾಘವೇಂದ್ರ, ಸಂಸದ ಆಯನೂರು ಮಂಜುನಾಥ್ ಉಪಸ್ಥಿತರಿರುವರು.