ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮಕ್ಕಳಿಂದ ರಾಷ್ಟ್ರಪ್ರಶಸ್ತಿಗೆ ಅರ್ಜಿ

Lingaraj Badiger
Updated On : 8 Jul 2013, 11:13 am

ಶಿವಮೊಗ್ಗ: ಶಿಕ್ಷಣ, ಕಲೆ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಮಕ್ಕಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡುವ ಯೋಜನೆಯೊಂದನ್ನು ಭಾರತ ಸರ್ಕಾರ ಜಾರಿಗೆ ತಂದಿದೆ. ಈ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 4ರಿಂದ 15ವರ್ಷದೊಳಗಿನ ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರಮಟ್ಟದ ಪ್ರಶಸ್ತಿಯು 20 ಸಾವಿರ ನಗದು, ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ಪ್ರತಿ ರಾಜ್ಯಕ್ಕೆ ಒಂದು ಬೆಳ್ಳಿ ಪದಕ, 10 ಸಾವಿರ ನಗದು ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು. ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಸಾಧಾರಣ ಪ್ರತಿಭೆಯುಳ್ಳವರಾಗಿದ್ದು, ಶಿಕ್ಷಣ, ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಳ ಕುರಿತು ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರಶಸ್ತಿಗೆ ಅರ್ಜಿ ಸಲ್ಲಿಸಲಿಚ್ಚಿಸುವವರು ನಿಗದಿತ ನಮೂನೆಯ ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಜುಲೈ 15ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ 08182 -249034ನ್ನು ಸಂಪರ್ಕಿಸಿ.
ಪ್ರತಿಭಾ ಪುರಸ್ಕಾರ
ಶಿವಮೊಗ್ಗ: ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಿದೆ. 20ರೊಳಗೆ ಅಂಚೆ ಮೂಲಕ ಮತ್ತು ನೇರವಾಗಿ ತಲುಪಿಸಲು ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಗಳಿಗಾಗಿ- 9980015152.
ಪ್ರತಿಭಾ ಪುರಸ್ಕಾರ
ಶಿವಮೊಗ್ಗ: ಜಾವಳ್ಳಿಯ ಜ್ಞಾನದೀಪ ವಿದ್ಯಾಸಂಸ್ಥೆ ಆವರಣದಲ್ಲಿ ಜುಲೈ 9ರಂದು ಬೆಳಿಗ್ಗೆ 11ಗಂಟೆಗೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಏರ್ಪಡಿಸಲಾಗಿದೆ. ಮುಖ್ಯಅತಿಥಿಯಾಗಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಕೆ.ಬಿ. ಪ್ರಸನ್ನ ಕುಮಾರ್ಪಾಲ್ಗೊಳ್ಳುವರು. ಸಂಸ್ಥೆಯ ಉಪಾಧ್ಯಕ್ಷ ಟಿ. ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಮಧ್ಯಾಹ್ನ 1 ರಿಂದ 2ಗಂಟೆವರೆಗೆ ಜಿಲ್ಲಾ ಪಪೂ ಕಾಲೇಜಿನ ಪ್ರಾಂಶುಪಾಲರಿಂದ ಶಿಕ್ಷಣಕ್ಕೆ ಸಂಬಂಧಪಟ್ಟಂತೆ  ಸಚಿವರೊಂದಿಗೆ ಸಂವಾದ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement