ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಧರ್ಮದೇಟು

Lingaraj Badiger
Updated On : 9 Jul 2013, 10:55 am

ಶಿವಮೊಗ್ಗ: ಯುವಕನೊಬ್ಬ ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಆತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಅಶೋಕ ನಗರದಲ್ಲಿ ನಡೆದಿದೆ.
ನದೀಂ ಎಂಬುವವನು ಅಶೋಕನಗರದ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಪಕ್ಕದ ಪೊದೆಯೊಂದರ ಬಳಿ ಕರೆದೊಯ್ದು ಆತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯರು ನದೀಂಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಆರೋಪಿಯ ಮೇಲೆ ಜಾತಿನಿಂದನೆ, ಆತ್ಯಾಚಾರ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆರೋಪಿ ಮೇಲೆ ಈ ಹಿಂದೆಯೇ ನಗರದ ಹಲವಾರು ಠಾಣೆಗಳಲ್ಲಿ ಸಣ್ಣ-ಪುಟ್ಟ ಕಳ್ಳತನ ಸೇರಿದಂತೆ ಮತ್ತಿತರ ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement