ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಮಡೆ ಸ್ನಾನ ರದ್ದುಪಡಿಸಿ'

Lingaraj Badiger
Updated On : 10 Jul 2013, 10:53 am

ಶಿವಮೊಗ್ಗ: ಉಡುಪಿ ಕೃಷ್ಣ ಮಠ ಸೇರಿದಂತೆ ರಾಜ್ಯದ ಇತರೆ ದೇವಸ್ಥಾನಗಳಲ್ಲಿ ಚಾಲ್ತಿಯಲ್ಲಿರುವ ಪಂಕ್ತಿ ಭೇದ ಹಾಗೂ ಮಡೇ ಸ್ನಾನ ಪದ್ಧತಿ ರದ್ದುಪಡಿಸುವಂತೆ ಒತ್ತಾಯಿಸಿ ಸಿಪಿಐಎಂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು, ಮಡೆಸ್ನಾನ ಹಾಗೂ ಪಂಕ್ತಿಭೇದ ಸಂಪ್ರದಾಯವನ್ನು ಟೀಕಿಸಿದರಲ್ಲದೇ, ತಕ್ಷಣವೇ ಸರ್ಕಾರ ಈ ಪದ್ಧತಿ ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಉಡುಪಿಯಲ್ಲಿ ಹೋರಾಟಗಾರರ ಮೇಲೆ ಹಾಕಿರುವ ಕೇಸನ್ನು ಹಿಂತೆಗೆದುಕೊಳ್ಳಬೇಕು ಎಂದು ಕಾರ್ಯಕರ್ತರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು. ಬಜೆಟ್‌ನಲ್ಲಿ ಜನಸಂಖ್ಯೆ ಆಧರಿಸಿ ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನುದಾನ ಹೆಚ್ಚಿಸಬೇಕು, ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತರಬೇಕು, ಭದ್ರಾವತಿಯ ವಿಐಎಸ್‌ಎಲ್, ಎಂಪಿಎಂ ಕಾರ್ಖಾನೆ ಪುನಶ್ಚೇತನಗೊ ನಳಿಸಬೇಕು, ವಿಐಎಸ್‌ಎಲ್‌ಗೆ ಪ್ರತ್ಯೇಕ ಗಣಿ ಮಂಜೂರು ಮಾಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಸಿಪಿಐಎಂನ ಜಿಲ್ಲಾ ಕಾರ್ಯದರ್ಶಿ ಎಸ್.ಬಿ. ಶಿವಶಂಕರ್,  ಎಂ. ನಾರಾಯಣ, ಅನಂತರಾಮ, ನರಸಿಂಹಯ್ಯ, ಹನುಮಮ್ಮ, ತುಳಸಿಪ್ರಭಾ ಮೊದಲಾದವರು ಧರಣಿ ವೇಳೆ ಹಾಜರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement