ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

22ರಂದು ಸರ್ಕಾರಿ ನೌಕರ ಸಂಘದ ಚುನಾವಣೆ

Lingaraj Badiger
Updated On : 11 Jul 2013, 10:51 am

ಕ.ಪ್ರ.ವಾರ್ತೆ  ಭದ್ರಾವತಿ  ಜು.10
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಹಾಗೂ ಯೋಜನಾ ಘಟಕಗಳ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು ಜು.22ರಂದು ಹಾಗೂ ತಾಲೂಕು ಶಾಖೆ, ಯೋಜನಾ ಘಟಕಗಳ ಅಧ್ಯಕ್ಷರು ಮತ್ತು ರಾಜ್ಯ ಪರಿಷತ್ ಸದಸ್ಯರ ಚುನಾವಣೆಯು ಆ.1ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಬಿ.ಎಸ್. ಮೈಲಾರಯ್ಯ ತಿಳಿಸಿದರು.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 28 ವಿವಿಧ ಇಲಾಖೆಗಳ 30 ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಇಲಾಖೆಗಳ 2609 ಮತದಾರರು ಮತ ಚಲಾಯಿಸಲಿದ್ದಾರೆ. ಕಾರ್ಯಕಾರಿ ಸಮಿತಿ ಚುನಾವಣೆಗೆ ವೇಳಾಪಟ್ಟಿಯು ಬಿಡುಗಡೆಯಾಗಿದ್ದು, ಜು.11ರಿಂದ ಜು.15ರ ವರೆಗೆ ನಾಮಪತ್ರಗಳನ್ನು ವಿತರಣೆ ಮಾಡಲಾಗುವುದು.
ಜು.16ರಂದು ನಾಮಪತ್ರಗಳನ್ನು ವಾಪಸ್ ಪಡೆಯಬಹುದು. ಕಣದಲ್ಲಿ ಉಳಿತ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಜು.16ರ ಸಂಜೆ 5 ಗಂಟೆಯ ನಂತರ ಪ್ರಕಟಿಸಲಾಗುವುದು.
ಜು.22ರಂದು ಚುನಾವಣೆ ನಡೆಯುವುದು. ಜು.22ರಂದು ಸಂಜೆ 4.30ರ ನಂತರ ಮತಗಳ ಎಣಿಕೆ ನಡೆಯುವುದು. ಮತ ಎಣಿಕೆ ಮುಗಿದ ನಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
ತಾಲೂಕು ಶಾಖೆ ಹಾಗೂ ಯೋಜನಾ ಘಟಕಗಳ ಅಧ್ಯಕ್ಷರು ಮತ್ತು ರಾಜ್ಯ ಪರಿಷತ್ ಸದಸ್ಯರ ಚುನಾವಣಾ ವೇಳಾಪಟ್ಟಿಯೂ ಸಹ ಬಿಡುಗಡೆಯಾಗಿದ್ದು, ಜು.23ರಿಂದ 25ರವರೆಗೆ ನಾಮಪತ್ರ ವಿತರಿಸಲಾಗುವುದು.
ಜು.25ರ ಸಂಜೆ 5 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಂದೇ ಸಂಜೆ 5.30ರ ನಂತರ ನಾಮಪತ್ರಗಳನ್ನು ಪರಿಶೀಲಿಸಲಾಗುವುದು.
ಜು.26ರ ಸಂಜೆ 4 ಗಂಟೆವರೆಗೆ ನಾಮಪತ್ರಗಳನ್ನು ವಾಪಸ್ ಪಡೆಯಬಹುದಾಗಿದೆ. ಕಣದಲ್ಲಿ ಉಳಿದ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಜು.26ರಂದು ಸಂಜೆ 5 ಗಂಟೆ ನಂತರ ಪ್ರಕಟಿಸಲಾಗುವುದು. ಆ.1ರಂದು ಚುನಾವಣೆ ನಡೆಯುವುದು. ಮತದಾನ ಮುಗಿದ ನಂತರ ಎಣಿಕೆ ನಡೆಸಿ ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಬಿ.ಎಸ್. ಮೈಲಾರಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳಾದ ಭದ್ರಾವತಿ ತಾಲೂಕು ಕಚೇರಿ ಶಿರಸ್ತೇದಾರ್ ಎಸ್.ಪಿ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಭದ್ರಾವತಿ ಶಾಖೆಯ ಅಧ್ಯಕ್ಷ ಎನ್. ಕೃಷ್ಣಪ್ಪ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement