ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬ್ಯಾಂಕಿಂಗ್ ಪರೀಕ್ಷಾ ಪೂರ್ವ ತರಬೇತಿ ಶಿಬಿರ

Lingaraj Badiger
Updated On : 11 Jul 2013, 10:51 am

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ರಾಷ್ಟ್ರೀಕೃತ ಮತ್ತು ಗ್ರಾಮೀಣ ಬ್ಯಾಂಕ್ಗಳಲ್ಲಿನ ವಿವಿಧ ಹುದ್ದೆಗಳಿಗೆ ನಡೆಯಲಿರುವ ಐಬಿಪಿಎಸ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು. 17ರಿಂದ 27ರವರೆಗೆ ಪರೀಕ್ಷಾಪೂರ್ವ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಪಿಯುಸಿ, ಬಿಕಾಂ, ಬಿಬಿಎಂ, ಬಿಎಸ್ಸಿ, ಬಿಎ ಅಥವಾ ಯಾವುದೇ ಪದವಿ ಪಡೆದ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
   ಅರ್ಹ ಪರೀಕ್ಷಾರ್ಥಿಗಳು ವಿವರಗಳಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಲೆನಾಡು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಕಟ್ಟಡ, 2ನೇ ತಿರುವು, ಗುತ್ಯಪ್ಪ ಕಾಲೋನಿ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಸಂಪರ್ಕಿಸಬಹುದು.
  ದೂ.ಸಂ. 08182-255293, ಮೊ. 9663437051, 9845297713. 9980184267 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement