ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಬೀದಿ ದೀಪ ಅಸಮರ್ಪಕ ನಿರ್ವಹಣೆಗೆ ಆಕ್ರೋಶ

Lingaraj Badiger
Updated On : 12 Jul 2013, 10:51 am

ಕ.ಪ್ರ.ವಾರ್ತೆ, ಶಿವಮೊಗ್ಗ, ಜು.11
ನಗರದ ನೂರು ಅಡಿ ರಸ್ತೆಯಲ್ಲಿರುವ ಬೀದಿ ದೀಪಗಳ ಅಸಮರ್ಪಕ ನಿರ್ವಹಣೆ ಹಾಗೂ ಕುಡಿಯುವ ನೀರು ಪೂರೈಕೆಯಲ್ಲಿನ ವ್ಯತ್ಯಯ ಖಂಡಿಸಿ ಯುವ ಜನತಾದಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಗರದ ಹೃದಯ ಭಾಗದಲ್ಲಿ ಹಾದುಹೋಗಿರುವ ನೂರು ಅಡಿ ರಸ್ತೆಯಲ್ಲಿನ ಬೀದಿ ದೀಪಗಳು ಹಾಳಾಗಿವೆ. ಬೀದಿ ದೀಪ ದುರಸ್ತಿಪಡಿಸುವಂತೆ ಹಲವು ಬಾರಿ ನಗರಸಭೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಸಂಬಂಧಿಸಿದ ಅಧಿಕಾರಿಗಳು ಸಂಪೂರ್ಣ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.
ಪಾದಚಾರಿಗಳಿಗೆ ತೊಂದರೆ: ಬೀದಿದೀಪ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ಪಾದಚಾರಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅಪಘಾತ ಹೆಚ್ಚುತ್ತಿವೆ ಎಂದು ಜೆಡಿಎಸ್ ಕಾರ್ಯಕರ್ತರು ಸಮಸ್ಯೆಯನ್ನು ವಿವರಿಸಿದರು.
ಮಳೆಗಾಲದಲ್ಲೇ ಕುಡಿವ ನೀರಿನ ಅಭಾವ ಕಾಣಿಸಿಕೊಂಡಿದೆ. ಹಲವು ಬಡಾವಣೆಗಳಲ್ಲಿ ನೀರಿನ ಹಾಹಾಕಾರ ಎದ್ದಿದ್ದರೂ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖ ಜಿ.ಡಿ. ಮಂಜುನಾಥ, ನಾಗರಾಜ್ ಕಂಕಾರಿ, ಏಳುಮಲೈ, ಶ್ರೀನಿವಾಸ್, ರವಿಪ್ರಸನ್ನ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement