ಲೇಖಕಿಯರ ಸಂಘಕ್ಕೆ ಸದಸ್ಯತ್ವ
ಶಿವಮೊಗ್ಗ: ಕರ್ನಾಟಕ ಲೇಖಕಿಯರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಸದಸ್ಯತ್ವ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತ ಲೇಖಕಿಯರು ಹಾಗೂ ಸಾಹಿತ್ಯಾಭಿರುಚಿ ಉಳ್ಳವರು ಜು.13ರಂದು ಸಂಜೆ 4 ಗಂಟೆಗೆ ಕರ್ನಾಟಕ ಸಂಘದಲ್ಲಿ ನಡೆಯುವ ಸಭೆಗೆ ಆಗಮಿಸಿ ಸದಸ್ಯತ್ವ ಅರ್ಜಿ ಪಡೆಯಬಹುದು. ಮಾಹಿತಿಗೆ ಮೊ. 9035030534.
ಪ್ರತಿಭಾ ಪುರಸ್ಕಾರ
ಶಿವಮೊಗ್ಗ: ಮಲೆನಾಡು ದೇವಾಂಗ ಸಂಘ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿರುವ ದೇವಾಂಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ನಿರ್ಧರಿಸಿದೆ. ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅಂಕಪಟ್ಟಿಯ ಛಾಯಾಪ್ರತಿಯೊಂದಿಗೆ ಸಂಘದ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.9243314246.