20ರಿಂದ ಬಸ್ ಪ್ರಯಾಣ ದರ ಹೆಚ್ಚಳ
ಶಿವಮೊಗ್ಗ: ಜು.20ರಿಂದ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗುವುದು ಎಂದು ಬಸ್ ಮಾಲೀಕರ ಸಂಘ ತಿಳಿಸಿದೆ. ಇತ್ತೀಚೆಗೆ ಇಂಧನ ದರ ಪದೇ ಪದೇ ಹೆಚ್ಚುತ್ತಿದ್ದು ಹಾಗೂ ನಿರ್ವಹಣ ವೆಚ್ಚ ಅಧಿಕಗೊಂಡಿದ್ದರಿಂದ ಅನಿವಾರ್ಯವಾಗಿ ಹೆಚ್ಚಿಸಬೇಕಾಗಿದೆ. ಆದ್ದರಿಂದ ಪ್ರಯಾಣಿಕರು ಸಹಕರಿಸುವಂತೆ ಸಂಘದ ಕಾರ್ಯದರ್ಶಿ ತಿಳಿಸಿದ್ದಾರೆ.