ರಕ್ತಹೀನತೆ ನಿಯಂತ್ರಣ ಕಾರ್ಯಕ್ರಮ
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹದಿಹರೆಯದವರಲ್ಲಿ ಕಂಡುಬರುವ ರಕ್ತಹೀನತೆಯ ಪ್ರಮಾಣವನ್ನು ನಿಯಂತ್ರಿಸಲು ವಾರಕ್ಕೊಂದು ಕಬ್ಬಿಣಾಂಶದ ಮಾತ್ರೆಯನ್ನು ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕಬ್ಬಿಣಾಂಶದ ಮಾತ್ರೆ ಮತ್ತು ಜಂತುಹುಳು ನಿವಾರಣಾ ಮಾತ್ರೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಬಾಲವಿಕಾಸ ಅಭಿವೃದ್ಧಿ ಯೋಜನಾಧಿಕಾರಿಗಳ ಮುಖಾಂತರ ವಿತರಿಸಲಾಗಿದೆ.
ಈ ಕಾರ್ಯಕ್ರಮವನ್ನು ಜುಲೈ 17ರಂದು ಮಧ್ಯಾಹ್ನ 12.30ಕ್ಕೆ ಬಿ.ಎಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದು, ಜಿಲ್ಲಾಧಿಕಾರಿ ವಿಫುಲ್ ಬನ್ಸಲ್ ಉದ್ಘಾಟಿಸುವರು.