ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ
ಶಿವಮೊಗ್ಗ: ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ಮಹಾವಿದ್ಯಾಲಯದ ಆಶ್ರಯದಲ್ಲಿ ಪುರದಾಳು ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿಕ್ಷಣ ನಿರ್ದೇಶಕ ಡಾ ಎ.ಎಸ್. ಕುಮಾರಸ್ವಾಮಿ, ತಂತ್ರಜ್ಞಾನ ಕೇವಲ ಹೊತ್ತಿಗೆಯ ಹೊರೆಯಾಗದೆ ಪ್ರತಿಯೊಬ್ಬ ರೈತನಿಗೂ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಶ್ರಮಿಸಬೇಕು ಎಂದರು.
ವೇದಿಕೆಯಲ್ಲಿ ಕೃಷಿ ಮಹಾವಿದ್ಯಾಲಯದ ಡೀನ್ ಡಾ ಮಂಜುನಾಥ್, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ ಎಂ.ಎಸ್. ವಿಘ್ನೇಶ್, ಕುಮಾರಸ್ವಾಮಿ, ನಾರಾಯಣಪ್ಪ, ಕಣ್ಣಪ್ಪ, ನವಲೆಮನೆ ಈಶ್ವರಪ್ಪ, ಪುರದಾಳು ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಶ್ವವಿದ್ಯಾಲಯದ ರಾ.ಸೇ.ಯೋ. ಸಂಯೋಜನಾಧಿಕಾರಿ ಡಾ. ನಾರಾಯಣ್ ಎಸ್. ಮಾವರ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.