ವಿಶ್ವ ಜನಸಂಖ್ಯಾ ದಿನಾಚರಣೆ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈತ್ರಿ ಗ್ರೂಪ್ ಆಫ್ ಇನ್ಸ್‌ಸ್ಟಿಟ್ಯೂಷನ್ ಹಾಗೂ ಎಫ್.ಪಿ.ಎ. ಇಂಡಿಯಾ ಸಂಯುಕ್ತಾಶ್ರಯದಲ್ಲಿ ಜುಲೈ 18ರಂದು ಬೆಳಿಗ್ಗೆ 11ಗಂಟೆಗೆ ನಗರದ ಬೈಪಾಸ್ ರಸ್ತೆಯಲ್ಲಿರುವ ಮೈತ್ರಿ ಕಾಲೇಜ್ ಆಫ್ ನರ್ಸಿಂಗ್ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಬಿ. ಪ್ರಸನ್ನುಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ವಿಫುಲ್ ಬನ್ಸಲ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಣ್ಣ ರೆಡ್ಡಿ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಎಫ್.ಪಿ.ಎ.ಇಂಡಿಯಾ ಪೂರ್ವಾಧ್ಯಕ್ಷ ಎ.ಎಸ್.ಹನುಮಾನ್ ಉಪನ್ಯಾಸ ನೀಡುವರು. ಈ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9ಗಂಟೆಗೆ ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಏರ್ಪಡಿಸಲಾಗಿರುವ ಜಾಥಾ ಕಾರ್ಯಕ್ರಮವನ್ನು ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ. ಅರುಣಾದೇವಿ ಉದ್ಘಾಟಿಸುವರು. ಮೈತ್ರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ ಉಪಸ್ಥಿತರಿರುವರು.