ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಂಘ ಪರಿವಾರದ ಪ್ರಮುಖ ನಾಗೇಶಪ್ರಭು

Lingaraj Badiger
Updated On : 18 Jul 2013, 11:01 am

ಹೊಸನಗರ: ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪ್ರಮುಖರಾಗಿ ಕಾರ್ಯನಿರ್ವಹಿಸಿದ್ದ ಜಯನಗರ ನಾಗೇಶ ಪ್ರಭು ಬುಧವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.
 ಒರ್ವ ಗಂಡು, ಹೆಣ್ಣು ಮಕ್ಕಳನ್ನು ಹೊಂದಿದ್ದ ಅವರಿಗೆ 50 ವರ್ಷವಾಗಿತ್ತು. ಬೆಳಿಗ್ಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡು ಹೊಸನಗರ ಆಸ್ಪತ್ರೆಗೆ ದಾಖಲಾಯಿಸಿತಾದರು ಯಾವುದೇ ಪ್ರಯೋಜನವಾಗದೆ ಕೊನೆಯುಸಿರೆಳೆದರು.
 ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ, ಅಕ್ರಮ ಗೋ ಸಾಗಣೆ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದ ನಾಗೇಶ ಪ್ರಭು ಚಿರಪರಿಚಿತರಾಗಿದ್ದರು. ಜಯನಗರ ಚಾಮುಂಡೇಶ್ವರಿ ದೇಗುಲ ಜೀರ್ಣೋದ್ಧಾರ, ಅಭಿವೃದ್ಧಿಗಾಗಿ ವಿಶೇಷ ಪ್ರಯತ್ನ ನಡೆಸಿದ್ದರು.
ಇವರ ನಿಧನಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಹರತಾಳು ಹಾಲಪ್ಪ, ಜಿಲ್ಲಾ ಸಹಕಾರಿ ಯೂನಿಯನ್ ಮಾಜಿ ಅಧ್ಯಕ್ಷ ವಾಟಗೋಡು ಸುರೇಶ್, ತಾಪಂ ಸದಸ್ಯೆ ಸುಮಾ ಸುಬ್ರಹ್ಮಣ್ಯ ಸಂತಾಪ ವ್ಯಕ್ತ ಪಡಿಸಿದ್ದಾರೆ. ಪ್ರಭು ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಬೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement