ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಅಂಗನವಾಡಿಗೆ ಸೌಲಭ್ಯ ಒದಗಿಸಿ'

Lingaraj Badiger
Updated On : 19 Jul 2013, 11:32 am

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.18
ಶಿವಮೊಗ್ಗ ನಗರಸಭೆ ವ್ಯಾಪ್ತಿಯಲ್ಲಿನ ಅಂಗನವಾಡಿಗಳಿಗೆ ಸೌಲಭ್ಯ ಒದಗಿಸುವಂತೆ ಕೆಜೆಪಿ ಮುಖಂಡರಾದ ಅರ್ಚನಾ ಬಳ್ಳೆಕೆರೆ ಒತ್ತಾಯಿಸಿದ್ದಾರೆ.
ಶಿವಮೊಗ್ಗ ನಗರಸಭೆ ವ್ಯಾಪ್ತಿಯಲ್ಲಿ 126 ಅಂಗನವಾಡಿ ಕೇಂದ್ರಗಳಿದ್ದು, ಇವುಗಳಲ್ಲಿ 22 ಕೇಂದ್ರ ಸ್ವಂತ ಕಟ್ಟಡ ಹೊಂದಿವೆ. 64 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಶಾಲೆಗಳಲ್ಲಿ 16, ಇತರೆಯಲ್ಲಿ 24ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.
10 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ನಿವೇಶನ ಲಭ್ಯವಿದೆ.  ತಾಪಂ ಮೂಲಕ ಆರ್‌ಐಡಿಎಫ್ ಯೋಜನೆಯಡಿ 7 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಹಣ ಮಂಜೂರಾಗಿ 1ವರ್ಷ ಪೂರೈಸಿದ್ದರೂ, ಇದುವರೆಗೂ ಕಾಮಗಾರಿ ಆರಂಭಿಸಿಲ್ಲ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನುದಾನ ಮಂಜೂರು: ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರ ಅಗತ್ಯವಿರುವ ಅನುದಾನ ಮಂಜೂರು ಮಾಡಿದೆ. ಇದರಲ್ಲಿ ಮಕ್ಕಳಿಗೆ ಗ್ಯಾಸ್ ಸ್ಟವ್, ಮಧ್ಯಾಹ್ನ ಮಲಗಲು ಚಾಪೆ, ಹೊದಿಕೆ, ಅಡುಗೆ ಮಾಡಲು ಕುಕ್ಕರ್, ಮಕ್ಕಳಿಗೆ ಕೂರಲು ಜಮಖಾನ, ಖುರ್ಚಿ ಸೌಲಭ್ಯ ಒದಗಿಸಬೇಕಿದೆ.
ಈ ಸೌಲಭ್ಯಗಳನ್ನು ಜಿಲ್ಲೆಯ ಹೊಸನಗರ ಮತ್ತು ಸೊರಬ ತಾಲೂಕಿನಲ್ಲಿ ಹೊರತು ಪಡಿಸಿ, ಬೇರೆ ಕಡೆ ವಿತರಿಸಿಲ್ಲ. ಶಿವಮೊಗ್ಗ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಸರಿಯಾದ ಸೌಲಭ್ಯ ಕಲ್ಪಿಸಿಲ್ಲ. ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳು ಚಿಕ್ಕಕೊಠಡಿಗಳಲ್ಲಿ ನಡೆಯುತ್ತಿವೆ. ಕಿಷ್ಕಿಂಧೆಯಂತಹ ಜಾಗದಲ್ಲೇ ಹೆಚ್ಚಿನ ಸಂಖ್ಯೆಯ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಸರ್ಕಾರ ಬಾಡಿಗೆ ಅಂಗನವಾಡಿ ಕೇಂದ್ರಗಳಿಗೆ ಕೇವಲ ರು. 500 ಮಂಜೂರು ಮಾಡಿದೆ. ಹೆಚ್ಚುವರಿ ಬಾಡಿಗೆಗೆ ಹಣವನ್ನು ನಗರಸಭೆಯಿಂದ ನೀಡಲು ಅವಕಾಶವಿದೆ.
ಅಲ್ಲದೇ ನಗರಸಭೆಯಿಂದ ಅಂಗನವಾಡಿಗೆ  ನಿವೇಶನ ಒದಗಿಸಿ ಸ್ವಂತ ಕಟ್ಟಡ ನಿರ್ಮಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement