ಜಿಲ್ಲಾ ವಿಜ್ಞಾನ ವಸ್ತುಪ್ರದರ್ಶನ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜು.20 ಮತ್ತು 21ರಂದು ನಗರದ ಬಿ.ಎಚ್. ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಇನ್ಸ್‌ಫೈರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳ ವಿಜ್ಞಾನ ವಸ್ತುಪ್ರದರ್ಶನಾಧಾರಿತ ಯೋಜನೆಗಳ ಜಿಲ್ಲಾ ಮಟ್ಟದ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಂಡಿದೆ.
ಜು.23 ಮತ್ತು 24ರಂದು ಹೊಸನಗರ ತಾಲೂಕು ರಿಪ್ಪನ್‌ಪೇಟೆಯ ಮೇರಿಮಾತಾ ಪ್ರೌಢಶಾಲಾ ಆವರಣದಲ್ಲಿ ಹಾಗೂ ಸೊರಬ ಮತ್ತು ಶಿಕಾರಿಪುರ ತಾಲೂಕಿನ ವಿದ್ಯಾರ್ಥಿಗಳಿಗಾಗಿ ಜುಲೈ 26 ಮತ್ತು 27ರಂದು ಶಿಕಾರಿಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇನ್‌ಸ್ಪೈರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳ ವಿಜ್ಞಾನ ವಸ್ತುಪ್ರದರ್ಶನಾಧಾರಿತ ಯೋಜನೆಗಳ ಸ್ಪರ್ಧಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಡಯಟ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.
ನಾಳೆ ಕುಂದುಕೊರತೆ ಸಭೆ
ಶಿವಮೊಗ್ಗ: ಜಿಲ್ಲಾ ಪೊಲೀಸ್ ಅಧೀಕ್ಷಕರು ಜುಲೈ 20ರಂದು ಮಧ್ಯಾಹ್ನ 12ಗಂಟೆಗೆ ಸಾಗರ ರಸ್ತೆಯಲ್ಲಿರುವ ಡಿಎಆರ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ನಾಗರಿಕರು ಅಥವಾ ಸಂಘ-ಸಂಸ್ಥೆಗಳವರು ಅಥವಾ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವೈಯಕ್ತಿಕ, ಸಾಮೂಹಿಕ ಸಮಸ್ಯೆಗಳ ಕುರಿತು ತಮ್ಮ ಅವಹಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.