ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

27ರಂದು ಕೃಷಿ ಮಾಹಿತಿ ಆಂದೋಲನ

Lingaraj Badiger
Updated On : 20 Jul 2013, 11:07 am

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜುಲೈ 27ರಂದು ನಗರದ ಅಂಬೇಡ್ಕರ್ ಭವನದಲ್ಲಿ ಕೃಷಿ ಮಾಹಿತಿ ಆಂದೋಲನ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಎಚ್. ಶಂಕರಮೂರ್ತಿ ಮತ್ತು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪನವರ ಉಪಸ್ಥಿತಿಯಲ್ಲಿ ಸಚಿವ ಕಿಮ್ಮನೆ ರತ್ನಾಕರ್ ಉದ್ಘಾಟಿಸುವರು. ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಭೂಚೇತನ ಹಸ್ತಪ್ರತಿಗಳನ್ನು ಬಿಡುಗಡೆಗೊಳಿಸುವರು. ಸಂಸದ ರಾಘವೇಂದ್ರ ಕೃಷಿ ಮಾಹಿತಿ ರಥಕ್ಕೆ ಚಾಲನೆ ನೀಡುವರು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್‌ಕೃಷಿ ಯಂತ್ರೋಪಕರಣಗಳನ್ನು ಫಲಾನುಭವಿಗಳಿಗೆ ವಿತರಿಸುವರು. ಕರ್ನಾಟಕ ಕೃಷಿ ಮಿಷನ್ ಅಧ್ಯಕ್ಷ ಡಾ.ಎಸ್.ಎ.ಪಾಟೀಲ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಶಿಮುಲ್ ಅಧ್ಯಕ್ಷ ಕೆ.ಎಲ್. ಜಗದೀಶ್ವರ್, ತಾಪಂ ಅಧ್ಯಕ್ಷೆ ದೇವಿಬಾಯಿ ಧರ್ಮಾನಾಯ್ಕ, ಅತಿಯಾಬೇಗಂ ನೂರುಲ್ಲಾಬೇಗ್, ಎಂ.ಎಸ್. ಮಹೇಂದ್ರನಾಥ್ ಹಾಗೂ ಶಶಿಧರ್ ಅತಿಥಿಯಾಗಿ ಆಗಮಿಸಲಿರುವರು. ಡಾ.ವಿ. ಚಂದ್ರಶೇಖರ್, ಸರ್ವೇಶ್ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಿ ಪಿ.ಎಂ. ಸಾಲಿಮಠ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ಜಿಪಂ ಸಿಇಒ ಡಾ. ಸಸಿಕಾಂತ್ ಸೆಂಥಿಲ್, ಎಸ್ಪಿ ಕೌಶಲೇಂದ್ರಕುಮಾರ್, ಡಿಸಿ ಬನ್ಸಲ್, ಜಂಟಿ ಕೃಷಿ ನಿರ್ದೇಶಕ ಡಾ.ಶಿವಮೂರ್ತಪ್ಪ ಭಾಗವಹಿಸುವರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement