ಆ.11ರಂದು ರಾಜ್ಯ ಪೌರಸೇವಾ ನೌಕರರ ಸಂಘದ ಚುನಾವಣೆ
ಭದ್ರಾವತಿ: ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಚುನಾವಣಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ತಾಲೂಕು ಅಧ್ಯಕ್ಷರ ಚುನಾವಣೆಯು ಆ.11ರಂದು ಬೆಳಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ನಡೆಯಲಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಚುನಾವಣೆ ಅಧಿಸೂಚನೆ ಜು.29ರಂದು ಪ್ರಕಟವಾಗಲಿದ್ದು, ನಾಮಪತ್ರಗಳನ್ನು ಆ.2ರ ಮಧ್ಯಾಹ್ನ 3 ಗಂಟೆಯವರೆಗೆ ಸ್ವೀಕರಿಸಲಾಗುವುದು. ಆ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯುವುದು.
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಆ.5ರ ಮಧ್ಯಾಹ್ನ 3 ಗಂಟೆಯವರೆಗೆ ಕಾಲಾವಕಾಶವಿರುತ್ತದೆ. ಮತ ಎಣಿಕೆ ಆ.11ರ ಮಧ್ಯಾಹ್ನ 12.30ರಿಂದ 5 ಗಂಟೆವರೆಗೆ ನಡೆಯುವುದು ಮತ್ತು ಎಣಿಕೆ ಕಾರ್ಯ ಮುಗಿದ ನಂತರ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಾಖಾ ಸಂಘದ ಮತ್ತು ಜಿಲ್ಲಾ ಸಂಘದ ನಿರ್ದೇಶಕರನ್ನು ಆಯ್ಕೆ ಮಾಡಲು ಚುನಾವಣಾ ಅಧಿಸೂಚನೆ ಈಗಾಗಲೇ ಪ್ರಕಟವಾಗಿದ್ದು ಗುರುವಾರ ನಾಮಪತ್ರಗಳನ್ನು ಸಹ ಸ್ವೀಕರಿಸಲಾಗಿದೆ.
ಜು.20ರಂದು ನಾಮಪತ್ರಗಳ ಪರಿಶೀಲನೆ ನಡೆಯುವುದು. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಜು.22ರ ಮಧ್ಯಾಹ್ನ 3 ಗಂಟೆವರೆಗೆ ಅವಕಾಶವಿರುತ್ತದೆ. ಜು.28ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯುವುದು. ಅಂದೇ ಸಂಜೆ 5.30ರ ವರೆಗೆ ಮತ ಎಣಿಕೆ ನಡೆದ ನಂತರ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.