ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕುಡಿತದಿಂದ ಮುಕ್ತರಾಗಿ: ಸಿದ್ದಮಲ್ಲಪ್ಪ

Lingaraj Badiger
Updated On : 22 Jul 2013, 10:40 am

ಕ.ಪ್ರ.ವಾರ್ತೆ, ಭದ್ರಾವತಿ,  ಜು.21
ಕುಡಿತದ ಚಟದಿಂದ ಇಡೀ ಕುಟುಂಬವೇ ಹಾಳಾಗುವುದು ಎಂದು ತಹಸೀಲ್ದಾರ್ ಸಿದ್ದಮಲ್ಲಪ್ಪ ನುಡಿದರು.
ತಾಲೂಕಿನ ಅರಳಿಕೊಪ್ಪ ಗ್ರಾಮದ ಶ್ರೀ ಪಾಂಡುರಂಗ ಸಾಧಕಾಶ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಶಿವಮೊಗ್ಗದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಸಂಯುಕ್ತಾಶ್ರಯದಲ್ಲಿ ನಡೆದ 608ನೇ ಮದ್ಯವರ್ಜನಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕುಟುಂಬದ ಹಿರಿಯರು ಕುಡಿತದ ಚಟಕ್ಕೆ ಬಲಿಯಾದರೆ ಕಿರಿಯರೂ ಅದನ್ನು ಅನುಕರಣೆ ಮಾಡುತ್ತಾರೆ ಎಂದ ಅವರು, ಇಂತಹ ಶಿಬಿರಗಳ ಪ್ರಯೋಜನ ಪಡೆದು ಮದ್ಯವ್ಯಸನದಿಂದ ದೂರಾಗಿ ಹೊಸ ಜೀವನವನ್ನು ಪ್ರಾರಂಭಿಸಬೇಕೆಂದು ವ್ಯಸನಿಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸುಧೀರ್ ಕುಮಾರ್ ಬಂಟ್ವಾಳ್, ಪ್ರಸ್ತುತ ಶಿಬಿರದಲ್ಲಿ 63 ಶಿಬಿರಾರ್ಥಿಗಳು ಸ್ವಯಂಪ್ರೇರಿತರಾಗಿ ಪಾನಮುಕ್ತರಾಗಲು ಬಯಸಿದ್ದು ಇದವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 607 ಶಿಬಿರಗಳು ನಡೆದಿದ್ದು 45 ಸಾವಿರಕ್ಕೂ ಹೆಚ್ಚು ಜನರು ಇದರಿಂದ ಪಾನಮುಕ್ತರಾಗಿದ್ದಾರೆಂದು ತಿಳಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಜಿ. ಆನಂದಕುಮಾರ್, ತಾರಿಕಟ್ಟೆಯ ಓಬಳರೆಡ್ಡಿ, ಯೋಜನಾಧಿಕಾರಿ ದಿನೇಶ್ ಕುಮಾರ್, ಅರಳಿಕೊಪ್ಪ ಸಿ.ಆರ್.ಪ್ರದೀಪ್, ನಾಗರಿಕ ಹಿತಚಿಂತನಾ ಸಂಘದ ಅಧ್ಯಕ್ಷ ಮಸ್ತಾನ್ ಉದ್ಘಾಟನಾ ಸಮಾರಂಭದಲ್ಲಿ ಹಾಜರಿದ್ದರು.
ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕರೂ ಆದ ಮದ್ಯವರ್ಜನಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ್ ಗೊಂದಿ ಅಧ್ಯಕ್ಷತೆ ವಹಿಸಿದ್ದರು. ಶಿಬಿರಾಧಿಕಾರಿ ನಾಗೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement