ಅರ್ಜಿ ಆಹ್ವಾನ
ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಕೋಟಾದಡಿಯಲ್ಲಿ ಆಯ್ಕೆಯಾಗಿ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಎನ್ಎಂ ಹಾಗೂ ನರ್ಸಿಂಗ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಭತ್ಯೆ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಜನಾಂಗದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನ 2 ಲಕ್ಷ ಮಿತಿಯೊಳಗಿರಬೇಕು. ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯ ಅರ್ಜಿಯನ್ನು ಆಯಾ ನರ್ಸಿಂಗ್ ಕಾಲೇಜುಗಳ ಪ್ರಾಂಶುಪಾಲರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೊದಲನೆ ಮಹಡಿ, ಸಿ.ಎಸ್.ಆಸ್ಪತ್ರೆ ಕಟ್ಟಡ, ಎಲ್.ಎಲ್.ಆರ್. ರಸ್ತೆ, ಶಿವಮೊಗ್ಗ ದೂರವಾಣಿ ಸಂಖ್ಯೆ 08182- 220206ನ್ನು ಅಥವಾ ಆಯಾ ತಾಲೂಕು ಬಿಸಿಎಂ ವಿಸ್ತರಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ.