ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅರ್ಜಿ ಆಹ್ವಾನ
ಕ.ಪ್ರ.ವಾರ್ತೆ, ಶಿವಮೊಗ್ಗ, ಜು.22
ಸಾರ್ವಜನಿಕ ಶಿಕ್ಷಣ ಇಲಾಖೆಯು 2014ನೇ ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಂದ ಪರೀಕ್ಷೆಗೆ ಕುಳಿತುಕೊಳ್ಳಲು ಶಾಲಾ- ಕಾಲೇಜುಗಳ ಮೂಲಕ ಅರ್ಜಿ ಆಹ್ವಾನಿಸಿದೆ.
ಖಾಸಗಿ ಅಭ್ಯರ್ಥಿಗಳು ವ್ಯಾಸಂಗ ಮಾಡದಿರುವ, ಅರ್ಧದಲ್ಲಿಯೇ ವ್ಯಾಸಂಗ ಮೊಟಕುಗೊಳಿಸಿರುವ ಅಥವಾ 2014ರ ಮಾರ್ಚ್ 1ಕ್ಕೆ 15ವರ್ಷಗಳ ವಯೋವಾನ ಪೂರ್ಣಗೊಳಿಸಿದವರು ನೇರವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕುಳಿತುಕೊಳ್ಳಲು ಅರ್ಹರಾಗಿರುತ್ತಾರೆ.
ಪರೀಕ್ಷಾ ಶುಲ್ಕ 345: ಸಾರ್ವಜನಿಕರ ಶಿಕ್ಷಣ ಇಲಾಖೆಯ ಉಪನಿರ್ದೇಶಕರಲ್ಲಿ ಖಾಸಗಿ ಅಭ್ಯರ್ಥಿಯಾಗಿ ಹೆಸರು ನೋಂದಾಯಿಸಿಕೊಂಡು ಪರೀಕ್ಷಾ ಅರ್ಜಿಯನ್ನು ಪುನ- ಶಾಲೆಗೆ ನೀಡಿ ನಿಗದಿತ ಪರೀಕ್ಷಾ ಶುಲ್ಕ 345 ಸಂಬಂಧಿತ ಶಾಲೆಗಳಲ್ಲಿ ಪಾವತಿಸಬೇಕು. ಹೆಚ್ಚಿನ ವಿವರಗಳಿಗಾಗಿ ತಮ್ಮ ಸಮೀಪದ ಶಾಲಾ-ಕಾಲೇಜು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಹಾಗೂ ಮಾಹಿತಿ ಪಡೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.