ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ರಸ್ತೆ ಕಾಂಕ್ರಿಟೀಕರಣಕ್ಕೆ ಆಗ್ರಹ

Lingaraj Badiger
Updated On : 24 Jul 2013, 11:23 am

ಶಿವಮೊಗ್ಗ: ಗೋಪಿ ವೃತ್ತದಿಂದ ಡಿವಿಎಸ್ ಕಾಲೇಜಿನ ಬಸವೇಶ್ವರ ವೃತ್ತದವರೆಗಿನ ರಸ್ತೆಯಲ್ಲಿರುವ ಗುಂಡಿಗಳನ್ನು ಸರಿಪಡಿಸಿ, ಕಾಂಕ್ರಿಟ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಸಲ್ಲಿಸಿದರು.
ನಗರದ 20ನೇ ವಾರ್ಡ್ ವ್ಯಾಪ್ತಿಗೆ ಬರುವ ಕೆ.ಟಿ. ಶಾಮಯ್ಯಗೌಡ ರಸ್ತೆಯಲ್ಲಿ ಶಾಲಾ ಕಾಲೇಜು, ನಗರಸಭೆ, ಸಿಟಿಕ್ಲಬ್, ಜಿಲ್ಲಾ ಗ್ರಂಥಾಲಯ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳಿವೆ. ಈ ಮಾರ್ಗದಲ್ಲಿ ಸಂಚರಿಸುವ ವಿದ್ಯಾರ್ಥಿಗಳು ಹಾಗೂ ವಾಹನ ಸವಾರರಿಗೆ ಓಡಾಡುವುದೇ ದುಸ್ತರವಾಗಿದೆ. ಇದೇ ರಸ್ತೆಯಲ್ಲಿ ಪ್ರತಿನಿತ್ಯ ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂಚರಿಸಿದರೂ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಗಮನಿಸಿ ಕಾಮಗಾರಿ ಕೈಗೆತ್ತಿಕೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ವಿಷಾದನೀಯ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಹರಸಾಹಸ: ರಸ್ತೆ ಹಾಳಾಗಿರುವುದರಿಂದ ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೇ ಇದೇ ಸ್ಥಳದಲ್ಲಿ ಹಲವು ಅಪಘಾತ ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ  ಅಗತ್ಯ ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕು ಹಾಗೂ ಮಳೆಗಾಲದ ನಂತರ ಕಾಂಕ್ರಿಟ್ ರಸ್ತೆ ನಿರ್ಮಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ರುದ್ರೇಶ್, ವಸುದೇವ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement