ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸರ್ಕಾರ ಆದೇಶದ ವಿರುದ್ಧ ಪ್ರತಿಭಟನೆ

Lingaraj Badiger
Updated On : 24 Jul 2013, 11:22 am

ಶಿವಮೊಗ್ಗ: ಆಟೋ ರಿಕ್ಷಾಗಳಲ್ಲಿ ಮಕ್ಕಳನ್ನು ಕರೆದೊಯ್ಯದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ಆಟೋ ರಿಕ್ಷಾಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಆದೇಶ ಹೊರಡಿಸಿದೆ. ಈ ಆದೇಶದಿಂದ ಆಟೋವನ್ನೇ ನಂಬಿ ಬದುಕುತ್ತಿರುವ ಚಾಲಕರಿಗೆ ಸಮಸ್ಯೆ ಉಂಟಾಗುತ್ತದೆ. ಅಲ್ಲದೇ ಶಾಲಾ ಮಕ್ಕಳಿಗೆ ಅತ್ಯಂತ ಕಡಿಮೆ ದರದಲ್ಲಿ ಕರೆದೊಯ್ಯವಾಗುತ್ತಿದ್ದು, ಆಟೋ ರಿಕ್ಷಾ ಚಾಲಕರು ವಿದ್ಯಾವಂತರಾಗಿದ್ದು ಕೆಲಸವಿಲ್ಲದೇ ಜೀವನೋಪಾಯಕ್ಕೆ ಆಟೋ ರಿಕ್ಷಾಗಳನ್ನು ಆಶ್ರಯಿಸಿದ್ದಾರೆ. ಆದರೆ, ಇದೀಗ ಸರ್ಕಾರದ ಆದೇಶದಿಂದ ಚಾಲಕರು ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಪರಿಶೀಲಿಸಿ ಬಡ ಆಟೋ ಚಾಲಕರನ್ನು ಪರಿಗಣಿಸಿ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸುದರ್ಶನ್, ಕಾರ್ಯಾಧ್ಯಕ್ಷ ಅನ್ಸರ್ ಅಹಮದ್, ಉಪಾಧ್ಯಕ್ಷ ಮುನೇಶ್ವರ್, ಬಾಷಾ, ಪ್ರಧಾನಕಾರ್ಯದರ್ಶಿ ಸೈಯದ್ ಮುಜೀಬುಲ್ಲಾ, ಕಿರಣ್ ಕುಮಾರ್, ಗೋವಿಂದ, ಮಂಜುನಾಥ್, ಮಧು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement