ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪೌರಾಯುಕ್ತರಾಗಿ ಕರಭೀಮಣ್ಣನವರ್

Lingaraj Badiger
Updated On : 25 Jul 2013, 11:09 am

ಶಿವಮೊಗ್ಗ: ಶಿವಮೊಗ್ಗ ನಗರಸಭಾ ಪೌರಾಯುಕ್ತರಾಗಿ ಮೂಕಪ್ಪ ಕರಭೀಮಣ್ಣನವರ್ ಬುಧವಾರ ಅಧಿಕಾರ ಸ್ವಿಕರಿಸಿದರು. ಈ ವೇಳೆ ಮಾತನಾಡಿದ ಅವರು, ಶಿವಮೊಗ್ಗ ನಗರವನ್ನು ಮಾದರಿ ಹಾಗೂ ಸ್ವಚ್ಛ ನಗರವನ್ನಾಗಿ ಮಾಡಲು ಮೊದಲ ಆದ್ಯತೆ ನೀಡಲಾಗುವುದು. ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಮಾಜದ ಹಲವು ಕ್ಷೇತ್ರಗಳಲ್ಲಿ ಶಿವಮೊಗ್ಗ ಜಿಲ್ಲೆ ತನ್ನದೇ ಆದ ವಿಶೇಷತೆ ಹೊಂದಿದೆ. ಇಲ್ಲಿನ ಸಿಬ್ಬಂದಿ ಸಹಕಾರದಿಂದ ಇನ್ನಷ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಅಭಿವೃದ್ಧಿ, ನಗರ ಸ್ವಚ್ಛತೆ, ದಕ್ಷ ಆಡಳಿತ ನೀಡಲು ಶ್ರಮಿಸುತ್ತೇನೆ. ಯಾವುದೇ ಒತ್ತಡಕ್ಕೆ ಮಣಿಯದೇ, ತಮ್ಮ ಅಧಿಕಾರ ಹಾಗೂ ಕಾನೂನಿನ ಚೌಕಟ್ಟಿಗೊಳಪಟ್ಟು ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.  ಈಗಾಗಲೇ ನಗರ ಸಭೆಯಿಂದ ನಗರ ಸ್ವಚ್ಛತೆ ಕುರಿತು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಗಳನ್ನು ಸಕಾಲಿಕವಾಗಿ ಅಗತ್ಯಕ್ಕೆ ತಕ್ಕಂತೆ ಅಲ್ಪಸ್ವಲ್ಪ ಬದಲಾವಣೆಗಳೊಂದಿಗೆ ಮುಂದುವರೆಸಿಕೊಂಡು ಹೋಗಲಾಗುವುದು ಎಂದರು. ಶಿವಮೊಗ್ಗ ಜಿಲ್ಲಾ ಸಾಕ್ಷರತಾ ಸಮಿತಿಯ ಕಾರ್ಯದರ್ಶಿಯಾಗಿ, ಭದ್ರಾವತಿ, ಶಿಕಾರಿಪುರ ಪುರಸಭೆಗಳಲ್ಲಿ ಮುಖ್ಯಾಧಿಕಾರಿಯಾಗಿ, ರಾಣೇಬೆನ್ನೂರಿನ ನಗರಸಭೆಯಲ್ಲಿ ಪೌರಾಯುಕ್ತರಾಗಿ(ಶ್ರೇಣಿ-1) ಕಾರ್ಯನಿರ್ವಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement