ಮಹಾಮನೆ ಸಂಚಿಕೆ ಬಿಡುಗಡೆ
ಕ.ಪ್ರ.ವಾರ್ತೆ, ಶಿವಮೊಗ್ಗ, ಜು.25
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜು.28ರಂದು ಬಸವಜಯಂತಿ ಶತಮಾನೋತ್ಸವ, ಎಚ್. ದೇವೀರಪ್ಪನವರ ಜನ್ಮ ಶತಮಾನೋತ್ಸವ ಹಾಗೂ ಮಹಾಮನೆ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ವಿನೋಬನಗರದ ಸಹಕಾರ ಮಹಾಮಂಡಳದ ಸಭಾಂಗಣದಲ್ಲಿ ಅಂದು ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಸವ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಶರಣ ಪರಿಷತ್ತಿನ ಅಧ್ಯಕ್ಷ ಕತ್ತಿಗೆ ಚನ್ನಪ್ಪ ಅಧ್ಯಕ್ಷತೆ ವಹಿಸುವರು.
ಮೃತ್ಯುಂಜಯ ರುಮಾಲೆ, ಬಿ.ಜಿ. ಚನ್ನೇಶ್ ಇದೇ ಸಂದರ್ಭದಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ ತಿಳಿಸಿದೆ.