ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಮೂಲ ಸೌಕರ್ಯಕ್ಕೆ ಆಗ್ರಹ

Lingaraj Badiger
Updated On : 26 Jul 2013, 11:31 am

ಕ.ಪ್ರ.ವಾರ್ತೆ, ಶಿವಮೊಗ್ಗ,  ಜು.25
ಇಲ್ಲಿನ ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿರುವ ಕೊಳಚೆ ಪ್ರದೇಶಕ್ಕೆ ಚರಂಡಿ, ಬೀದಿದೀಪ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ವೇದಿಕೆ ಸದಸ್ಯರು, ಸೌಲಭ್ಯಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು. ಹಲವು ಬಾರಿ ಮನವಿ ಸಲ್ಲಿಸಿದರೂ ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಂದ ಸ್ಪಂದನೆ ಸಿಕ್ಕಿಲ್ಲ. ರಾಜಕಾರಣಿಗಳು ಇಲ್ಲಿನ ಮತದಾರರನ್ನು ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದ್ದಾರೆಯೇ ವಿನಃ ಸೌಲಭ್ಯ ಕಲ್ಪಿಸಲು ಆಸಕ್ತಿ ತೋರಿಸುತ್ತಿಲ್ಲ ಎಂದು ಟೀಕಿಸಿದರು.
ಈ ಕೂಡಲೇ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘಟನೆ  ಅಧ್ಯಕ್ಷ ಗೋ. ರಮೇಶ್ ಗೌಡ, ಶಾಂತಮ್ಮ, ಮಂಜುನಾಥ್, ನರಸಿಂಹ, ರೀಟಮ್ಮ, ರಾಜುನಾಯ್ಕ, ಸ್ನೇಹ ಮೊದಲಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement