ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

10 ಕುರಿಗಳ ಸಾವು

Lingaraj Badiger
Updated On : 27 Jul 2013, 10:56 am

ಸಾಗರ: ತಾಲೂಕಿನ ಮಾಸೂರು ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೆರಿಯಪ್ಪ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದು 10 ಕುರಿಗಳು ಮೃತಪಟ್ಟ ಘಟನೆ ನಡೆದಿದೆ. ಮಾಸೂರಿನ ಕೆರಿಯಪ್ಪ ಅವರು ಕುರಿ ಸಾಕಾಣಿಕೆ ಮಾಡುತ್ತಿದ್ದು, ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಅವರ ಮನೆಯ ಗೋಡೆ ಕುಸಿದಿದೆ. ಇದರಿಂದ 10 ಕುರಿಗಳು ಹಾಗೂ ಮನೆಯಲ್ಲಿದ್ದ ವಸ್ತುಗಳು ನಾಶವಾಗಿ ಸುಮಾರು 70 ಸಾವಿರಕ್ಕೂ ಹೆಚ್ಚಿನ ನಷ್ಟ ಸಂಭವಿಸಿದೆ. ಸೂಕ್ತ ಪರಿಹಾರ ಕಲ್ಪಿಸಿಕೊಡುವಂತೆ ಕೆರಿಯಪ್ಪ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement