ಸಿಂಥೆಟಿಕ್ ಟ್ರ್ಯಾಕ್ ಉದ್ಘಾಟನೆ ಆಗಸ್ಟ್ 3ರಂದು
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂತಾರಾಷ್ಟ್ರೀಯ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ಹಾಗೂ ರಾಜ್ಯ ಮಟ್ಟದ 25ನೇ ಜ್ಯೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಆಗಸ್ಟ್ 3ರಂದು ಮಧ್ಯಾಹ್ನ 3ಗಂಟೆಗೆ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹಾಗೂ ವಿಪ ಸಭಾಪತಿ ಡಿ.ಎಚ್. ಶಂಕರಮೂರ್ತಿ ಉಪಸ್ಥಿತಿಯಲ್ಲಿ ಕ್ರೀಡಾ ಇಲಾಖೆ ಸಚಿವ ಕೆ. ಅಭಯಚಂದ್ರ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ಉದ್ಘಾಟಿಸುವರು. ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ವಿಕಾಸ್ಕುಮಾರ್ ವಿಕಾಸ್, ನಿವೃತ್ತ ನಿರ್ದೇಶಕ ಎಂ.ಕೆ. ಬಲದೇವಕೃಷ್ಣ, ಜಿಪಂ ಸದಸ್ಯ ಕಲಗೋಡು ರತ್ನಾಕರ್ ಹಾಗೂ ಎಸ್.ವಿ. ತಿಮ್ಮಯ್ಯ ಮತ್ತಿತರರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು.