'ಪಾಠದಂತೆ ಕ್ರೀಡೆಯನ್ನೂ ಪ್ರೋತ್ಸಾಹಿಸಿ'
ಶಿವಮೊಗ್ಗ: ಕ್ರೀಡೆ ಮಕ್ಕಳಲ್ಲಿ ಸದೃಢ ದೇಹದೊಂದಿಗೆ ಉತ್ತಮ ಮನಸ್ಸನ್ನು ನೀಡುತ್ತದೆ. ಇದರಿಂದ ತಮ್ಮ ಜೀವನದ ಗುರಿಯನ್ನು ಸುಲಭವಾಗಿ ತಲುಪಬಹುದು ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅಭಿಪ್ರಾಯಪಟ್ಟರು.
ಜಿಲ್ಲಾ ಟೆಕ್ವಾಂಡೋ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಆಶ್ರಯದಲ್ಲಿ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ 31ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಮಾತನಾಡಿ, ಮಕ್ಕಳು ಓದಿನೊಂದಿಗೆ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಆರೋಗ್ಯ ಸಂಪಾದಿಸಬೇಕು ಎಂದರು.
ಜಿಲ್ಲಾ ಓಲಂಪಿಕ್ ಸಂಸ್ಥೆಯ ಕಾರ್ಯದರ್ಶಿ ಶಶಿ, ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಎಸ್.ಪಿ. ದಿನೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯಾಧ್ಯಕ್ಷ ಟಿ. ಪ್ರವೀಣ್ಕುಮಾರ್. ಡಿ.ಎಸ್. ಅರುಣ್ ಮತ್ತಿತರರು ಇದ್ದರು.