ವಿಐಎಸ್ಎಲ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಆಸ್ಪತ್ರೆ ಹಾಗೂ ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ವಿಐಎಸ್ಎಲ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ವಿಐಎಸ್ಎಲ್ ಆಸ್ಪತ್ರೆಯ ಜಂಟಿ ನಿರ್ದೇಶಕ ಡಾ. ವೈ. ಆನಂದ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ಡಾ. ಕವಿತ, ಮಾನವ ಸಂಪನ್ಮೂಲಾಭಿವೃದ್ಧಿ ಸಹಾಯಕ ಮಹಾಪ್ರಬಂಧಕ ಎಸ್.ಆರ್. ಕೃಷ್ಣ, ಸ್ವಯಂಪ್ರೇರಿತ ರಕ್ತದಾನಿಗಳ ಗುಂಪಿನ ಮುಖಂಡ ಕ್ರಾಂತಿಕುಮಾರ್, ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಎನ್. ಚಂದ್ರಹಾಸ, ಉಪಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಹೊನ್ನಯ್ಯ, ಖಜಾಂಚಿ ರೇವಣ್ಣ ಮತ್ತಿತರ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.
ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಎನ್. ಚಂದ್ರಹಾಸ ರಕ್ತದಾನಿಗಳಿಗೆ ಪ್ರಮಾಣಪತ್ರ ಮತ್ತು ಫಲಗಳನ್ನು ವಿತರಿಸಿದರು. ಒಟ್ಟು 33 ದಾನಿಗಳು ರಕ್ತದಾನ ಮಾಡಿದರು.