ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಇಂದು ಪರಿಸರ ಜಾಥಾ

Rashmi Kasaragodu
Updated On : 30 Jul 2013, 11:14 am

ಶಿವಮೊಗ್ಗ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿವಮೊಗ್ಗ ತಾಲೂಕು ಘಟಕ ವಿವಿಧ ಸಂಘ ಸಂಸ್ಥೆ ಸಹಯೋಗದಲ್ಲಿ ಪರಿಸರ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಜು. 30ರಂದು ಆಯೋಜಿಸಿದೆ.
ಬೆಳ್ಗಗೆ 10.30ಕ್ಕೆ ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ಎಎಎಸ್ ಸಮುದಾಯ ಭವನಕ್ಕೆ ಜಾಥಾ ಹೊರಡಲಿದೆ. ಈ ಜಾಥಾದಲ್ಲಿ 300ಕ್ಕೂ ಹೆಚ್ಚು ಮಹಿಳಾ ಸದಸ್ಯರು ಪಾಲ್ಗೊಳ್ಳುವರು. ಸಾಂಕೇತಿಕವಾಗಿ ಶಾಲೆಯಲ್ಲಿ 10 ಸಸಿಗಳನ್ನು ನೆಡಲಾಗುತ್ತದೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯೊಂದಿಗೆ ಸಾಮಾಜಿಕ ಅರಣ್ಯ ಇಲಾಖೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುವುದು ಎಂದು  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಕೃಷಿ ಅಧಿಕಾರಿ ಯೋಗೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement