ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಎಸ್ಸೆಸ್ಸೆಎಲ್‌ಸಿ, ಪಿಯುಸಿ ಪ್ರತಿಭಾ ಪುರಸ್ಕಾರ ಸಮಾರಂಭ

Rashmi Kasaragodu
Updated On : 30 Jul 2013, 11:15 am

ಭದ್ರಾವತಿ: 2012-13ನೇ ಸಾಲಿಗೆ 7ನೇ ತರಗತಿ, ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಕಾರ್ಖಾನೆಯ ಉದ್ಯೋಗಿಗಳ ಮಕ್ಕಳಿಗೆ ಗುರುವಾರ ಸಂಜೆ ವಿಐಎಸ್‌ಎಲ್‌ನ ಭದ್ರಾ ಅತಿಥಿಗೃಹದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗಿತ್ತು.
ಮೂವರು ದ್ವಿತೀಯ ಪಿ.ಯು ವಿದ್ಯಾರ್ಥಿಗಳು, ಮೂವರು ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ಮತ್ತು ಈರ್ವರು ಏಳನೇ ತರಗತಿಯ ಮಕ್ಕಳನ್ನು ಈ ಸಮಾರಂಭದಲ್ಲಿ ಪುರಸ್ಕರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಸ್ಥಾವರದ ಕಾರ್ಯಪಾಲಕ ನಿರ್ದೇಶಕ ಎಸ್.ಎಸ್.ವರ್ಮಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಿದರು. ವಿಐಎಸ್‌ಎಲ್‌ನ ಸಿಬ್ಬಂದಿ ಹಾಗೂ ಆಡಳಿತ ಮಹಾಪ್ರಬಂಧಕ ಎ.ರಂಗರಾಜನ್, ಸ್ಥಾವರಗಳ ಮಹಾಪ್ರಬಂಧಕ ಎಚ್.ಕೆ. ವೆಂಕಟೇಶಕುಮಾರ್, ಇತರ ಹಿರಿಯ ಸಿಬ್ಬಂದಿಗಳು, ವಿಐಎಸ್‌ಎಲ್ ಅಧಿಕಾರಿಗಳ ಮತ್ತು ವಿಐಎಸ್‌ಎಲ್ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಇಸ್ಪಾತ್ ಮಹಿಳಾ ಸಮಾಜದ ಪದಾಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement